Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನ ತೇಜಸ್ಸು ಸೂರ್ಯನಂತಿದೆ, ಆತನ ಕೈಗಳಿಂದ ಕಿರಣಗಳು ಹೊರಹೊಮ್ಮುತ್ತಿವೆ, ಆತನು ಶಕ್ತಿ ಸಾಮರ್ಥ್ಯಗಳ ನಿಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ರವಿಯಂತಿದೆ ಆತನ ತೇಜಸ್ಸಿನ ಮೆರೆತ ಕಿರಣಗಳು ಹೊರಹೊಮ್ಮುತಿವೆ ಆತನ ಕರಗಳಿಂದ ಮರೆಯಾಗಿದೆ ಅಲ್ಲೇ ಆತನ ಶಕ್ತಿಸಾಮರ್ಥ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 [ಆತನ] ತೇಜಸ್ಸು ಸೂರ್ಯನಂತಿದೆ, ಅದರ ಪಕ್ಕಗಳಲ್ಲಿ ಕಿರಣಗಳು ಹೊರಡುತ್ತಿವೆ; ಅದೇ ಆತನ ಶಕ್ತಿನಿಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬೆಳಕಿನ ಕಿರಣಗಳು ಆತನ ಕೈಯಿಂದ ಹೊಳೆಯುತ್ತವೆ. ಅದು ಹೊಳೆಯುವಂಥ ಪ್ರಕಾಶಮಾನವಾದ ಹೊಳಪು. ಆ ಕೈಗಳಲ್ಲಿ ಅಂಥಾ ಶಕ್ತಿಯು ಅಡಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರ ತೇಜಸ್ಸು ಸೂರ್ಯೋದಯದ ಹಾಗಿತ್ತು. ಕಿರಣಗಳು ಅವರ ಹಸ್ತಗಳಿಂದ ಮಿಂಚಿದವು. ಅದರಲ್ಲಿ ಅವರ ಬಲ ಅಡಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 3:4
14 ತಿಳಿವುಗಳ ಹೋಲಿಕೆ  

ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.


ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?”


ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ, ಇಸ್ರಾಯೇಲರ ಪಾಳೆಯಕ್ಕೂ ನಡುವೆ ಬಂದಿತು. ಅದು ಐಗುಪ್ತ್ಯರಿಗೆ ಕತ್ತಲನ್ನೂ, ಇಸ್ರಾಯೇಲರಿಗೆ ರಾತ್ರಿಯಲ್ಲಿ ಬೆಳಕನ್ನು ಕೊಟ್ಟಿದ್ದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಾಗಲಿಲ್ಲ.


ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.


ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.


ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.


ಹಗಲಿನಲ್ಲಿ ಮೇಘಸ್ತಂಭವಾಗಿಯೂ, ರಾತ್ರಿ ವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭವಾಗಿಯೂ ಅವರ ಮುಂದೆ ನೀನು ನಡೆದೆ.


ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.


ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.


ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗೆಂಡಗಳೂ ಹೊರಟು, ಆತನ ಸುತ್ತಲಿದ್ದ ಕಪ್ಪು ಮೋಡಗಳನ್ನು ದಾಟಿ ಸುರಿದವು.


ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು.


ಇಗೋ! ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವದಿಕ್ಕಿನ ಮಾರ್ಗವಾಗಿ ಬಂದಿತ್ತು ಮತ್ತು ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ಮಹಿಮೆಯಿಂದ ಭೂಮಿಯು ಪ್ರಕಾಶಿಸುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು