Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ನಿಂತುಕೊಳ್ಳಲು ಭೂಮಿಯು ಅಳೆದನು. ಆತನು ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಶಿಖರಗಳು ಕುಸಿದು ಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕಂಪಿಸುತ್ತದೆ ಭೂಮಿ ಆತ ನಿಂತಾಗ ಅದರುತ್ತದೆ ಲೋಕ ಆತ ದಿಟ್ಟಿಸಿದಾಗ ಸೀಳಿಹೋಗುತ್ತವೆ ಪುರಾತನಪರ್ವತಗಳು ಕುಸಿದುಬೀಳುತ್ತವೆ ಸನಾತನ ಗಿರಿಗಳು ಅನಾದಿಯಿಂದ ಹಾಗೆಯೆ ಆತನ ಆಗಮನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ನಿಂತುಕೊಳ್ಳಲು ಭೂವಿುಯು ಕಂಪಿಸುತ್ತದೆ; ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಗಳು ಕುಸಿದುಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ನಿಂತು ಪ್ರಪಂಚದ ನ್ಯಾಯತೀರಿಸಿದನು. ಎಲ್ಲಾ ಜನಾಂಗಗಳ ಜನರ ಕಡೆಗೆ ನೋಡಿದನು. ಅವರು ಭಯದಿಂದ ನಡುಗಿದರು. ತಲಾಂತರಗಳಿಂದ ಪರ್ವತಗಳು ಸ್ಥಿರವಾಗಿ ನಿಂತಿದ್ದವು. ಆದರೆ ಅದೇ ಪರ್ವತಗಳು ತುಂಡುತುಂಡಾಗಿ ಬಿದ್ದವು. ಪುರಾತನ ಕಾಲದ ಬೆಟ್ಟಗಳು ಬಿದ್ದುಹೋದವು. ಹಾಗೆ ಮಾಡಲು ದೇವರು ಯಾವಾಗಲೂ ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ನಿಂತುಕೊಂಡು ಭೂಮಿಯನ್ನು ನಡುಗಿಸಿದರು. ಅವರು ನೋಡಿ ಜನಾಂಗಗಳನ್ನು ನಡುಗುವಂತೆ ಮಾಡಿದರು. ಪುರಾತನ ಪರ್ವತಗಳು ಸೀಳಿಹೋದವು. ಹಳೆಯ ಕಾಲದ ಗುಡ್ಡಗಳು ಬಿದ್ದು ಹೋದವು. ಅವರ ಮಾರ್ಗಗಳು ನಿತ್ಯವಾದವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 3:6
35 ತಿಳಿವುಗಳ ಹೋಲಿಕೆ  

ನಿನ್ನ ತಂದೆಯ ಆಶೀರ್ವಾದಗಳು ನಿನ್ನ ಪೂರ್ವಿಕರ ಆಶೀರ್ವಾದಕ್ಕಿಂತಲೂ ಮೀಗಿಲಾಗಿರುತ್ತದೆ. ಆದಿಯಿಂದಲೂ ಪರ್ವತಗಳಿಂದ ಉಂಟಾಗುವ ಎಲ್ಲಾ ಮೇಲುಗಳಿಗಿಂತಲೂ, ಸದಾಕಾಲ ಪ್ರಕೃತಿಯಿಂದ ಉಂಟಾಗುವ ಎಲ್ಲಾ ಸುಫಲಗಳು ಕೊನೆಯವರೆಗೂ ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಸಮೃದ್ಧಿಯಾಗಿ ದೊರೆಯುವುದು.


ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.


ಅನಾದಿಯಾದ ಪರ್ವತಗಳ ಉತ್ಪನ್ನ, ಶಾಶ್ವತವಾದ ಬೆಟ್ಟಗಳಿಂದುಂಟಾಗುವ ಮೇಲು,


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,


ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.


ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತಿವೆ; ಪ್ರವಾಹದೋಪಾದಿಯಲ್ಲಿ ಆಕಾಶವು ಮಳೆಗರೆಯುತ್ತಿದೆ; ಸಾಗರವು ಆರ್ಭಟಿಸಿ ಅಲೆಗಳನ್ನು ಮೇಲಕ್ಕೆ ಎತ್ತುತ್ತದೆ.


ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.


ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.”


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.


ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.


ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು.


ಎಲೈ, ಶಿಖರೋನ್ನತಪರ್ವತಗಳೇ, ದೇವರು ತನ್ನ ನಿವಾಸಕ್ಕಾಗಿ ಆರಿಸಿಕೊಂಡಿರುವ ಈ ಪರ್ವತವನ್ನು ನೀವು ಓರೆಗಣ್ಣಿನಿಂದ ನೋಡುವುದೇಕೆ? ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು.


ಯೆಹೋವನ ಮುಂದೆ ಪರ್ವತಗಳು ಕರಗಿಹೋದವು, ಇಸ್ರಾಯೇಲಿನ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು.


ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.


ಆ ಎತ್ತು ಮಗನನ್ನಾಗಲಿ ಅಥವಾ ಮಗಳನ್ನಾಗಲಿ ತಿವಿದರೆ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.


ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಬಲಪಡಿಸುವಿ, ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಕಟ್ಟಿಕೊಂಡಿರುವ ಸ್ಥಳದವರೆಗೂ ಕರ್ತನೇ, ನೀನು ನಿನಗಾಗಿ ಸಿದ್ಧಪಡಿಸಿಕೊಂಡಿರುವ ಪವಿತ್ರ ಪರ್ವತದವರೆಗೂ ಅವರನ್ನು ಬರಮಾಡುವಿ.


ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸಾರಿ? ಎಷ್ಟು ಸಾರಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು?


ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ.


ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.


ಜನಾಂಗಗಳು ಇದನ್ನು ಕೇಳಿ ನಡುಗುವರು. ಫಿಲಿಷ್ಟಿಯದಲ್ಲಿ ವಾಸಿಸುವವರು ಭಯಭೀತರಾಗುವರು.


ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.


ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ಆತನು ಪರ್ವತಗಳನ್ನು ಅರಿಯದಂತೆ ಸರಿಸಿ ಕೋಪದಿಂದ ಅವುಗಳನ್ನು ಉರುಳಿಸುತ್ತಾನೆ.


ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು.


ಆತನು ದೃಷ್ಟಿಸಿದ ಮಾತ್ರದಿಂದಲೇ ಭೂಮಿಯು ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು