Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳ ಮೇಲೆ ಸಿಟ್ಟುಗೊಂಡಿದ್ದಿಯಾ? ಸಮುದ್ರದ ಮೇಲೆ ಕೋಪವನ್ನು ಪ್ರದರ್ಶಿಸುತ್ತೀಯೋ? ಇಲ್ಲಾ, ನೀನು ಜಯರಥಗಳಲ್ಲಿ ಆಸೀನನಾಗಿ ಮೋಡಗಳ ಮೇಲೆ ರಕ್ಷಣೆಯನ್ನು ಕಳುಹಿಸಿದಾತನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮೋಡಗಳ ಮೇಲೆ ನೀ ಆಗಮಿಸಿದೆ ಏಕೆ? ಜಯರಥಗಳಲ್ಲಿ ಆಸೀನನಾಗಿ ಬಂದೆ ಏಕೆ? ಸರ್ವೇಶ, ನಿನಗೆ ರೌದ್ರವೇ ನದಿಗಳ ಮೇಲೆ? ಸಿಟ್ಟುಸಿಡುಕವೇ ಹೊಳೆಗಳ ಮೇಲೆ? ರೋಷಾವೇಷವೇ ಸಮುದ್ರದ ಮೇಲೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳಿಗೆ ಸಿಟ್ಟುಗೊಂಡಿದ್ದೀಯಾ? ಸಮುದ್ರದ ಮೇಲೆ ಕೋಪವೋ? ಏಕೆ ನಿನ್ನ ಅಶ್ವಗಳ ಮೇಲೆ ಆರೂಢನಾಗಿ ನಿನ್ನ ಜಯರಥಗಳಲ್ಲಿ ಆಸೀನನಾಗಿ ಬರುತ್ತಿದ್ದೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನೇ, ನೀನು ನದಿಗಳ ಮೇಲೆ ಕೋಪಗೊಂಡಿದ್ದೀಯೋ? ತೊರೆಗಳ ಮೇಲೆ ನೀನು ಕೋಪಗೊಂಡಿದ್ದೀಯೋ? ಸಮುದ್ರದ ಮೇಲೆ ನೀನು ಕೋಪಗೊಂಡಿದ್ದೀಯೋ? ನೀನು ನಿನ್ನ ಕುದುರೆಗಳ ಮೇಲೆ ಮತ್ತು ರಥಗಳ ಮೇಲೆ ಸವಾರಿ ಮಾಡಿದಾಗ ಕೋಪಗೊಂಡಿದ್ದೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರೇ, ನದಿಗಳ ಮೇಲೆ ರೌದ್ರಗೊಂಡಿರುವಿರೋ? ಪ್ರವಾಹಗಳ ಮೇಲೆ ನಿಮ್ಮ ಕೋಪವಿತ್ತೋ? ನೀವು ಕುದುರೆಗಳನ್ನು ಮತ್ತು ರಥಗಳನ್ನು ಮುನ್ನಡೆಸಿದಾಗ ವಿಜಯಕ್ಕೆ ನೀವು ಸಮುದ್ರದ ಮೇಲೆ ಕೋಪಗೊಂಡಿದ್ದೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 3:8
24 ತಿಳಿವುಗಳ ಹೋಲಿಕೆ  

ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನೇ, ಏಕೆ ಹಿಂದಿರುಗುತ್ತೀ?


ಸಮುದ್ರವು ಕಂಡು ಓಡಿಹೋಯಿತು; ಯೊರ್ದನ್ ಹೊಳೆಯು ಹಿಂದಿರುಗಿತು.


ಕೆರೂಬಿವಾಹನನಾಗಿ ಹಾರಿ, ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು.


ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.


ನಿನ್ನ ಅಶ್ವಗಳನ್ನು ಏರಿದವನಾಗಿ ಸಮುದ್ರವನ್ನು ತುಳಿಯುತ್ತಾ, ಮಹಾಜಲರಾಶಿಗಳನ್ನು ಹಾದುಹೋಗಿದ್ದೀ.


ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.


ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.


ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.


ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.


ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.


ನಾನು ನೋಡಲು ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲ್ಪಟ್ಟಿತು. ಅವನು ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು.


ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ.


ಮೋಶೆ ಮತ್ತು ಆರೋನರು ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ಫರೋಹನ ಮತ್ತು ಅವನ ಪರಿವಾರದ ಮುಂದೆ ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯಲು ಅದೆಲ್ಲಾ ರಕ್ತವಾಯಿತು.


ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ ‘ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು” ಅಂದನು.


ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು, ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಕೊಂಡು ಹೋಗುವರು.


ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು.


ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು