Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ತನ್ನ ವಾಕ್ಯವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜುದೇಯ ನಾಡಿನಲ್ಲಿ ಉಜ್ಜೀಯ, ಯೋತಾಮ, ಆಹಾಜ ಮತ್ತು ಹಿಜ್ಕೀಯ ಇವರು ಅರಸರಾಗಿದ್ದಾಗ ಹಾಗೂ ಇಸ್ರಯೇಲ್ ನಾಡಿನಲ್ಲಿ ಯೋವಾಷನ ಮಗ ಯಾರೊಬ್ಬಾಮನು ಆಳುತ್ತಿದ್ದ ಕಾಲದಲ್ಲಿ, ಬೆಯೇರಿಯನ ಮಗನಾದ ಹೊಶೇಯನಿಗೆ ದೇವರು ದಯಪಾಲಿಸಿದ ಸಂದೇಶವಿದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದದ ಅರಸನಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬೆಯೇರಿಯ ಮಗನಾದ ಹೋಶೇಯನಿಗೆ ಯೋಹೋವನಿಂದ ಬಂದ ಸಂದೇಶ: ಈ ಸಂದೇಶವು ಯೆಹೂದ ಪ್ರಾಂತ್ಯದ ಅರಸರಾದ ಉಜ್ಜೀಯ, ಯೋಥಾಮ, ಅಹಾಜ ಮತ್ತು ಹಿಜ್ಕೀಯ ಇವರ ಆಳ್ವಿಕೆಯ ಸಮಯದಲ್ಲಿ ಬಂದಿತು. ಇದು ಇಸ್ರೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಕಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದದ ಅರಸರಾದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗ ಹೋಶೇಯನಿಗೆ ಯೆಹೋವ ದೇವರ ವಾಕ್ಯವು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 1:1
26 ತಿಳಿವುಗಳ ಹೋಲಿಕೆ  

ಆ ವಚನವೇನಂದರೆ, “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು.


ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ.


ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.


ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು.


ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಉಜ್ಜೀಯನ ಮಗನಾದ ಯೋತಾಮನು ಆಳತೊಡಗಿದನು.


ಯೆಹೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯಾರೊಬ್ಬಾಮನು ಅರಸನಾದನು.


ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.


ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ


ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಅದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು.


ಯೆಹೋವನು ಅಮಿತ್ತೈಯನ ಮಗನಾದ ಯೋನನಿಗೆ ಹೇಳಿದ್ದೇನೆಂದರೆ,


ಪೆತೂವೇಲನ ಮಗನಾದ ಯೋವೇಲನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.


ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ, ಯಾಜಕನೂ ಆದ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಕೇಳಿಸಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.


ಕರ್ತನಾದ ಯೆಹೋವನು ನನಗೆ,


ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.


ಯೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನದಲ್ಲಿ ಸಮಾಧಿಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು.


ಯೆಹೂದದ ಅರಸನೂ, ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಲ್ವತ್ತೊಂದು ವರ್ಷ ಆಳಿದನು.


ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.


ಅಜರ್ಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ರಾಜಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೋತಾಮನು ಅರಸನಾದನು.


ಯೋತಾಮನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷಗಳ ಕಾಲ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆಯು ಇವನ ತಾಯಿ.


ಆಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಅವನು ಯೆಹೋವನ ಚಿತ್ತಾನುಸಾರವಾಗಿ ನಡೆಯಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟುಬಿಟ್ಟನು.


ದೇವರಿಗೆ ಕಾಣಿಕೆಯಾಗಿ ಕೊಡಲ್ಪಟ್ಟ ಹಿಂಡುಗಳಲ್ಲಿ ಹೋರಿಗಳು ಆರುನೂರು, ಕುರಿಗಳು ಮೂರು ಸಾವಿರ.


ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು