ಹೋಶೇಯ 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು. ಅಧ್ಯಾಯವನ್ನು ನೋಡಿ |