ಹೋಶೇಯ 1:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸರ್ವೇಶ್ವರಸ್ವಾಮಿ ಪ್ರಥಮವಾಗಿ ಹೊಶೇಯನ ಸಂಗಡ ಮಾತನಾಡುತ್ತಾ ಆತನಿಗೆ ಹೇಳಿದ್ದೇನೆಂದರೆ: “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೊ. ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೊ. ಏಕೆಂದರೆ, ನನ್ನ ಪ್ರಜೆ ನನ್ನನ್ನು ತೊರೆದುಬಿಟ್ಟು ವ್ಯಭಿಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಇದು ನಿದರ್ಶನವಾಗಿರಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ಹೋಶೇಯನ ಸಂಗಡ ಮೊದಲು ಮಾತಾಡಿದಾಗ ಆತನು ಅವನಿಗೆ - ನೀನು ಹೋಗಿ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ; ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡಿಸುತ್ತದೆಂಬದಕ್ಕೆ ಇದು ದೃಷ್ಟಾಂತವಾಗಿರಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಹೋಶೇಯನಿಗೆ ಯೆಹೋವನಿಂದ ಬಂದ ಸಂದೇಶದಲ್ಲಿ ಇದು ಮೊದಲನೆಯದು. ಯೆಹೋವನು ಹೇಳಿದ್ದೇನೆಂದರೆ, “ನೀನು ಹೋಗಿ ಒಬ್ಬ ವೇಶ್ಯೆಯನ್ನು ಮದುವೆಯಾಗು. ಆ ವೇಶ್ಯೆಯಿಂದ ಮಕ್ಕಳನ್ನು ಪಡೆದುಕೊ. ಯಾಕೆಂದರೆ ಈ ದೇಶದ ಜನರು ಸೂಳೆಯಂತೆ ವರ್ತಿಸಿರುತ್ತಾರೆ. ಅವರು ಯೆಹೋವನಿಗೆ ಅಪನಂಬಿಗಸ್ತಿಕೆಯುಳ್ಳವರಾಗಿರುತ್ತಾರೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರು ಹೋಶೇಯನೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ, ಯೆಹೋವ ದೇವರು ಹೋಶೇಯನಿಗೆ, “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೋ ಮತ್ತು ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ ಈ ದೇಶವು ನನ್ನನ್ನು ತೊರೆದುಬಿಟ್ಟು, ವ್ಯಭಿಚಾರಿಣಿಯಾದ ಹೆಂಡತಿಯಂತೆ ಯೆಹೋವ ದೇವರಿಗೆ ದ್ರೋಹ ಬಗೆದಿದೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.