Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನಗಿಷ್ಟವಾದಾಗ ನಾನು ಅವರನ್ನು ದಂಡಿಸುವೆನು; ಅವರ ಎರಡು ಅಪರಾಧಗಳ ದಂಡನೆಗೋಸ್ಕರ ಜನಾಂಗಗಳು ಅವರಿಗೆ ವಿರುದ್ಧವಾಗಿ ಒಟ್ಟುಗೂಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಕಾಲದಲ್ಲಿ ನಾನು ಅವರನ್ನು ದಂಡಿಸುವೆನು; ಅವರ ಇಮ್ಮಡಿ ಅಪರಾಧಕ್ಕೆ ತಕ್ಕ ಶಾಸ್ತಿ ಆಗುವುದು; ಆಗ ಇತರ ರಾಷ್ಟ್ರಗಳು ಅವರಿಗೆ ವಿರುದ್ಧವಾಗಿ ಒಂದುಗೂಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನಗಿಷ್ಟವಾದಾಗ ನಾನು ಅವರನ್ನು ದಂಡಿಸುವೆನು; ಅವರ ಎರಡು ಅಪರಾಧಗಳ ದಂಡನೆಗೋಸ್ಕರ ಜನಾಂಗಗಳು ಅವರಿಗೆ ವಿರುದ್ಧವಾಗಿ ಒಟ್ಟುಗೂಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರನ್ನು ಶಿಕ್ಷಿಸಲು ನಾನು ಬರುವೆನು. ಸೈನ್ಯಗಳು ಒಟ್ಟಾಗಿ ಅವರಿಗೆ ವಿರುದ್ಧವಾಗಿ ಬರುವವು. ಅವರು ಬಂದು ಇಸ್ರೇಲರನ್ನು ಅವರಿಬ್ಬರ ಪಾಪಗಳಿಗಾಗಿ ಶಿಕ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು. ಅವರ ಇಮ್ಮಡಿ ಅಪರಾಧಕ್ಕೆ ತಕ್ಕ ಶಾಸ್ತಿಯಾಗುವುದು, ಆಗ ಇತರ ರಾಷ್ಟ್ರಗಳು ಅವರಿಗೆ ವಿರುದ್ಧವಾಗಿ ಒಂದುಗೂಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:10
20 ತಿಳಿವುಗಳ ಹೋಲಿಕೆ  

“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ಜನರೂ, ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು.


ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.


ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು.


“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ಹೆಂಗಸರ ವಿರುದ್ಧವಾಗಿ ಸಭೆಯನ್ನು ಸೇರಿಸಿ, ಇವರನ್ನು ಸೂರೆಗೆ ಸಿಕ್ಕಿಸಿ, ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.


“ಆದಕಾರಣ ನಾನು ಅವಳನ್ನು ಅವಳ ಪ್ರಿಯರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು.


ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.


ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.


ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಹಾಕುವೆನು.


ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.


ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.


ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.


ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದಿ; ಆಹಾ, ನಿನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಗಿಬ್ಯದಲ್ಲಿ ನಡೆದ ಯುದ್ಧಕ್ಕೆ ಅವರು ತುತ್ತಾಗುವುದಿಲ್ಲವೋ?.


ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.


ನೇಗಿಲ ಸಾಲಿಗೆ ಕಾಡುಕೋಣವನ್ನು ಹಗ್ಗದಿಂದ ಕಟ್ಟುವೆಯಾ? ಅದು ತಗ್ಗಿನ ಭೂಮಿಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ?


ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವುದು; ತಾವು ಮಾಡುತ್ತಿದ್ದ ವಿಗ್ರಹದ ಯಜ್ಞಗಳಿಗೆ ನಾಚಿಕೆಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು