Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಗೆಯ್ಯದ ನಿಮ್ಮ ಭೂವಿುಯನ್ನು ಗೆಯ್ಯಿರಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನನ್ನು ಶರಣುಹೊಗುವ ಸಮಯವು ಒದಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀನು ಒಳ್ಳೆಯತನವನ್ನು ಬಿತ್ತಿದರೆ ಪ್ರೀತಿಯೆಂಬ ಬೆಳೆಯನ್ನು ಕೊಯ್ಯುವೆ. ನಿನ್ನ ನೆಲವನ್ನು ಉಳುಮೆ ಮಾಡು. ಆಗ ನೀನು ಯೆಹೋವನೊಂದಿಗೆ ಬೆಳೆಯನ್ನು ಕೊಯ್ಯುವೆ. ಆತನು ಬರುವನು. ಮತ್ತು ಆತನ ಒಳ್ಳೆಯತನವು ನಿನ್ನ ಮೇಲೆ ಮಳೆಯಂತೆ ಸುರಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮಗಾಗಿ ನೀತಿಯ ಬೀಜವನ್ನು ಬಿತ್ತಿರಿ. ಪ್ರೀತಿಯ ಫಲವನ್ನು ಕೊಯ್ಯಿರಿ. ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ. ಏಕೆಂದರೆ ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವವರೆಗೂ ಯೆಹೋವ ದೇವರನ್ನು ಹುಡುಕುವ ಸಮಯ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:12
33 ತಿಳಿವುಗಳ ಹೋಲಿಕೆ  

ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.


ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು. ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ, ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.


ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.


ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.


ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.


ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.


ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು.


ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.


ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.


ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.


ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.


ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!


ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.


ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!


ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.


ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು, ಅವರೂ ಪ್ರವಾದಿಸುವರು.


ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು.


ನೀರಾವರಿಗಳಲ್ಲೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ!


ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.


ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.


ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.


ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,


ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.


ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.


ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.


ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.


ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು