Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನ ಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ಹರಟೆಹೊಡೆಯುತ್ತಾರೆ; ಸುಳ್ಳಾಣೆ ಇಟ್ಟು ಸಂಧಾನಮಾಡಿಕೊಳ್ಳುತ್ತಾರೆ. ಉತ್ತಹೊಲದಲ್ಲಿ ಬೆಳೆಯುವ ವಿಷದ ಕಳೆಗಳಂತೆ ನ್ಯಾಯಸ್ಥಾನಕ್ಕೆ ಬರುವ ಅವರ ವಾದವಿವಾದಗಳು ಹೆಚ್ಚಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ವಾಗ್ದಾನ ಮಾಡುತ್ತಾರೆ. ಆದರೆ ಅದು ಕೇವಲ ಸುಳ್ಳು, ಅವರು ಕೊಟ್ಟ ಮಾತನ್ನು ನಡಿಸುವದಿಲ್ಲ. ಬೇರೆ ದೇಶಗಳವರೊಂದಿಗೆ ಅವರು ಒಪ್ಪಂದ ಮಾಡುತ್ತಾರೆ. ದೇವರು ಆ ಒಪ್ಪಂದವನ್ನು ಒಪ್ಪುವುದಿಲ್ಲ. ಅವರ ನ್ಯಾಯಾಧೀಶರು ಉತ್ತ ಹೊಲದಲ್ಲಿ ಬೆಳೆಯುವ ವಿಷದ ಹಣಜಿಯಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡುವುದಕ್ಕೆ ಸುಳ್ಳು ಪ್ರಮಾಣವನ್ನು ಮಾಡುತ್ತಾರೆ. ಆದ್ದರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:4
16 ತಿಳಿವುಗಳ ಹೋಲಿಕೆ  

ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ? ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷವನ್ನಾಗಿ ಮಾಡಿ, ಧರ್ಮದ ಸುಫಲವನ್ನು ಕಹಿಯಾಗಿಸಿದಿರಿ.


ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.


ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ,


ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು.


ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ” ಅಂದನು


ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.


“ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.


ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು