Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವುದು. ಎಫ್ರಾಯೀಮಿಗೆ ಅವಮಾನವಾಗುವುದು, ಇಸ್ರಾಯೇಲ್ ತಾನು ಸಂಕಲ್ಪಿಸಿಕೊಂಡ ವಿಷಯಕ್ಕಾಗಿ ನಾಚಿಕೆಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ವಿಗ್ರಹವನ್ನು ಅಸ್ಸೀರಿಯದ ಜಗಳಗಂಟಿ ರಾಜನಿಗೆ ಕಾಣಿಕೆಯಾಗಿ ಕೊಡಲಾಗುವುದು. ಎಫ್ರಯಿಮಿಗೆ ಅವಮಾನವಾಗುವುದು. ಇಸ್ರಯೇಲ್ ತಾನು ಕೆತ್ತಿಸಿಕೊಂಡ ವಿಗ್ರಹಕ್ಕಾಗಿ ನಾಚಿಕೆಗೀಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವದು; ಎಫ್ರಾಯೀವಿುಗೆ ಅವಮಾನವಾಗುವದು, ಇಸ್ರಾಯೇಲು ತಾನು ಸಂಕಲ್ಪಿಸಿಕೊಂಡ ವಿಷಯವಾಗಿ ನಾಚಿಕೆಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಶ್ಶೂರದ ಅರಸನಿಗೆ ಬಹುಮಾನವಾಗಿ ಅದು ಒಯ್ಯಲ್ಪಡುವುದು; ಅವನು ಇಸ್ರೇಲರ ನಾಚಿಕೆಗೆಟ್ಟ ವಿಗ್ರಹವನ್ನು ಇಟ್ಟುಕೊಳ್ಳುವನು. ಇಸ್ರೇಲ್ ತನ್ನ ವಿಗ್ರಹಕ್ಕಾಗಿ ನಾಚಿಕೆಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದು ಸಹ, ಮಹಾರಾಜನಿಗೆ ಕಾಣಿಕೆಯಾಗಿ ಅಸ್ಸೀರಿಯಕ್ಕೆ ಒಯ್ಯಲಾಗುವುದು. ಎಫ್ರಾಯೀಮು ನಾಚಿಕೆಯನ್ನು ಹೊಂದುವುದು. ಇಸ್ರಾಯೇಲ್ ಸಹ ತನ್ನ ಸಲಹೆಯ ಬಗ್ಗೆ ನಾಚಿಕೆಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:6
22 ತಿಳಿವುಗಳ ಹೋಲಿಕೆ  

ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು.


ಆದುದರಿಂದ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆಯು, ಐಗುಪ್ತವನ್ನು ಆಶ್ರಯಿಸುವುದರಿಂದ ಅವಮಾನವು ಉಂಟಾಗುವುದು.


ಅವರ ದೇವರುಗಳನ್ನೂ, ಎರಕದ ಬೊಂಬೆಗಳನ್ನೂ, ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ, ಸೂರೆ ಮಾಡಿಕೊಂಡು ಐಗುಪ್ತಕ್ಕೆ ಬಂದು, ಕೆಲವು ವರ್ಷಗಳ ತನಕ ಉತ್ತರ ದಿಕ್ಕಿನ ರಾಜನ ತಂಟೆಗೆ ಹೋಗುವುದಿಲ್ಲ.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.


ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”


ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.


ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವುದು; ತಾವು ಮಾಡುತ್ತಿದ್ದ ವಿಗ್ರಹದ ಯಜ್ಞಗಳಿಗೆ ನಾಚಿಕೆಪಡುವರು.


ಅವರು ಹೆಚ್ಚಿದ ಹಾಗೆಲ್ಲಾ ನನ್ನ ವಿರುದ್ಧ ಹೆಚ್ಚೆಚ್ಚಾಗಿ ಪಾಪಮಾಡುತ್ತಾ ಬಂದರು; ನಾನು ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುವೆನು.


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.”


ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.


ವಿಗ್ರಹಗಳನ್ನು ಕೆತ್ತುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು. ಹೌದು, ಒಟ್ಟಿಗೆ ಅವಮಾನದಲ್ಲಿ ಮುಳುಗುವರು.


“ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.


ಅವನ ಬಲವುಳ್ಳ ಹೆಜ್ಜೆಗಳು ಇಕ್ಕಟ್ಟಾಗುವುದು, ಅವನ ಆಲೋಚನೆಯೇ ಅವನನ್ನು ಕೆಡವಿಹಾಕುವುದು.


ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.


ಮತ್ತು ಇಷ್ಟೂ ಸಾಲದೆಂದು ಅಶ್ಶೂರ್ಯರೊಂದಿಗೂ ವ್ಯಭಿಚಾರಮಾಡಿದಿ; ಹೌದು, ಅವರೊಡನೆ ವ್ಯಭಿಚಾರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು