Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಮಾರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮರದ ಚಕ್ಕೆಗೆ ಸಮಾನನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಮಾರ್ಯದ ರಾಜನು ಪ್ರವಾಹದಲ್ಲಿ ಕೊಚ್ಚಿಕೊಂಡುಹೋಗುವ ಕಡ್ಡಿಯಂತೆ ಕಣ್ಮರೆ ಆಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸಮಾರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಚಕ್ಕೆಗೆ ಸಮಾನನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸಮಾರ್ಯದ ಸುಳ್ಳುದೇವರು ನಾಶಮಾಡಲ್ಪಡುವದು. ಅದು ಮರದ ಹಲಗೆಯ ತುಂಡೊಂದು ನೀರಿನ ಮೇಲೆ ತೇಲುವಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಮಾರ್ಯ ಹಾಗು ಅದರ ಅರಸನು ನೀರಿನ ಮೇಲಿನ ಕಡ್ಡಿಯ ಹಾಗೆ ಅಳಿದು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:7
9 ತಿಳಿವುಗಳ ಹೋಲಿಕೆ  

“ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ. ರಾಜನಾದರೋ ನಮಗಾಗಿ ಏನು ಮಾಡಿಯಾನು?” ಎಂದು ಈಗ ಅವರು ಅಂದುಕೊಳ್ಳಬೇಕಾಯಿತು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.


ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; ಕೋಪೋದ್ರೇಕನಾಗಿ ಅವರನ್ನು ತೆಗೆದು ಹಾಕಿದ್ದೇನೆ.


ನಿಮ್ಮ ದುಷ್ಟತನವು ಬಹಳವಾಗಿರುವುದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವುದು; ಬೆಳಗಾಗುವುದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು.


ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಐಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.


ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.


ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?


ಅನಂತರ ಸಂಭವಿಸಿದ್ದೇನೆಂದರೆ, ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷಿತೋಟವಿತ್ತು.


ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು