ಹೋಶೇಯ 10:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು; ಮುಳ್ಳುಗಿಡಗಳೂ ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು - ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ ಎಂದು ಕೂಗಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇಸ್ರೇಲ್ ಪಾಪ ಮಾಡುತ್ತಾ ಇನ್ನೂ ಹೆಚ್ಚಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿತು. ಆವೆನ್‌ನಲ್ಲಿರುವ ಎತ್ತರವಾದ ಸ್ಥಳ ನಾಶಮಾಡಲ್ಪಡುವದು. ಅದರ ಮೇಲೆ ಮುಳ್ಳುಗಿಡಗಳೂ ಹಣಜಿಗಳೂ ಬೆಳೆಯುವವು. ಆಗ ಅವರು ಪರ್ವತಗಳಿಗೆ, “ನಮ್ಮನ್ನು ಮುಚ್ಚಿರಿ” ಎಂದೂ ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ” ಎಂದೂ ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇಸ್ರಾಯೇಲಿನ ಪಾಪಕ್ಕೆ ಆಸ್ಪದವಾದ ಆವೆನಿನ ಉನ್ನತ ಪೂಜಾಸ್ಥಳಗಳು ಹಾಳಾಗಿ ಹೋಗುವುವು. ಮುಳ್ಳುಗಿಡಗಳೂ, ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವುವು. ಜನರು ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ! ಗುಡ್ಡಗಳಿಗೆ, ನಮ್ಮನ್ನು ಮುಚ್ಚಿಕೊಳ್ಳಿರಿ!” ಎನ್ನುವರು. ಅಧ್ಯಾಯವನ್ನು ನೋಡಿ |
ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.