Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 11:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಶತ್ರುಗಳ ಕಡೆಗೆ ಸಿಂಹದಂತೆ ಗರ್ಜಿಸುವ ಸ್ವಾಮಿಯನ್ನು ಆ ಜನರು ಹಿಂಬಾಲಿಸುತ್ತಾರೆ. ಆತ ಆರ್ಭಟಿಸಲು ಅವರ ಮಕ್ಕಳು ನಡುನಡುಗುತ್ತಾ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಡುವಲಿಂದ ನಡುಗುತ್ತಾ ಬರುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಸಿಂಹದಂತೆ ಗರ್ಜಿಸುವೆನು. ನಾನು ಗರ್ಜಿಸುವಾಗ ನನ್ನ ಮಕ್ಕಳು ಬರುವರು ಮತ್ತು ನನ್ನನ್ನು ಹಿಂಬಾಲಿಸುವರು. ಪಶ್ಚಿಮದಿಂದ ನನ್ನ ಮಕ್ಕಳು ಹೆದರಿ ನಡುಗುತ್ತಾ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಯೆಹೋವ ದೇವರ ಹಿಂದೆ ಹೋಗುವರು. ಅವರು ಸಿಂಹದ ಹಾಗೆ ಗರ್ಜಿಸುವರು. ಅವರು ಗರ್ಜಿಸುವಾಗ ಪಶ್ಚಿಮದಿಂದ ಮಕ್ಕಳು ನಡುಗುತ್ತಾ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 11:10
36 ತಿಳಿವುಗಳ ಹೋಲಿಕೆ  

ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.”


ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.


ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.


ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು, “ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು. ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.


ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ, ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ!


ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,


ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.


ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮದಿಕ್ಕಿನ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು,


ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.


ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತದವರೆಗೆ ನಡೆಯುವೆವು.


ಸಿಂಹವು ಗರ್ಜಿಸಿದರೆ, ಭಯಪಡದೆ ಇರುವವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಕೇಳಿ ಪ್ರವಾದಿಸದವರು ಯಾರು?


ಬೇಟೆಯ ಬಲಿ ಕಾಣದೇ ಸಿಂಹವು ಅರಣ್ಯದಲ್ಲಿ ಗರ್ಜಿಸುವುದೋ? ಏನನ್ನೂ ಬೇಟೆಯಾಡದೆ ಪ್ರಾಯದ ಸಿಂಹವು ಗವಿಯಲ್ಲಿ ಕುಳಿತು ಗುರುಗುಟ್ಟುವುದೋ?


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”


ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,


ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,


ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


“ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.


ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.


ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.


ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ.


ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ. ಆಯಿನ್.


ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.


“ಇದಲ್ಲದೆ ನನ್ನ ಎದೆಯು ಅದಕ್ಕೆ ತತ್ತರಗೊಂಡು, ಮಿಡಿಯುತ್ತ ತನ್ನ ಸ್ಥಳದಿಂದ ಕದಲುವುದು.


ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.


ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.


ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.


ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರೆದುತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದ್, ಲೆಬನೋನುಗಳ ಪ್ರಾಂತ್ಯಕ್ಕೆ ಬರಮಾಡುವೆನು; ಅವರಿಗೆ ಸಾಕಾಗುವಷ್ಟು ಸ್ಥಳ ಸಿಕ್ಕದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು