Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 11:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದರ ದುರಾಲೋಚನೆಗಳ ನಿಮಿತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು, ಅಲ್ಲಿನ ಕೋಟೆಗಳನ್ನು ಧ್ವಂಸಮಾಡಿ ನುಂಗಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತಮ್ಮ ಇಚ್ಛಾನುಸಾರ ಅವರು ನಡೆದ ಕಾರಣ, ಅವರ ಪಟ್ಟಣಗಳಲ್ಲಿ ಕತ್ತಿಯ ಕಾಳಗ ನಡೆಯುವುದು. ಅವರ ಪುರದ್ವಾರದ ಕತ್ತಿಯ ಕಬ್ಬಿಣದ ಅಗುಳಿಗಳನ್ನು ಮುರಿದು ಕೋಟೆಯಲ್ಲೇ ಅವರನ್ನು ಕಡಿದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದರ ದುರಾಲೋಚನೆಗಳ ನಿವಿುತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು ಅಲ್ಲಿನ ಲಾಳವಿಂಡಿಗೆಗಳನ್ನು ಧ್ವಂಸಮಾಡಿ ನುಂಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರ ನಗರದ ಮೇಲೆ ಖಡ್ಗವು ಬೀಸಲ್ಪಟ್ಟು ಅವರ ಬಲಿಷ್ಠರನ್ನು ಸಾಯಿಸುವದು; ಅವರ ನಾಯಕರನ್ನು ನಾಶಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರ ಪಟ್ಟಣಗಳಲ್ಲಿ ಖಡ್ಗವು ಹೊಳೆಯುವುದು. ಅದು ಅವರ ಸುಳ್ಳು ಪ್ರವಾದಿಗಳನ್ನು ನುಂಗಿಹಾಕುತ್ತದೆ. ಮತ್ತು ಅವರ ಯೋಜನೆಗಳನ್ನು ಕೊನೆಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 11:6
25 ತಿಳಿವುಗಳ ಹೋಲಿಕೆ  

ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.


ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು. ಕಾಳಗದ ದಿನದಲ್ಲಿ ಶಲ್ಮಾನನು ತಾಯಿ ಮತ್ತು ಮಕ್ಕಳನ್ನು ಒಟ್ಟಿಗೆ ಬಂಡೆಗೆ ಅಪ್ಪಳಿಸಲ್ಪಡುವುದು. ಬೇತ್ ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.


ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವುದು. ಎಫ್ರಾಯೀಮಿಗೆ ಅವಮಾನವಾಗುವುದು, ಇಸ್ರಾಯೇಲ್ ತಾನು ಸಂಕಲ್ಪಿಸಿಕೊಂಡ ವಿಷಯಕ್ಕಾಗಿ ನಾಚಿಕೆಪಡುವುದು.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ನಿನ್ನ ದೇಶದ ಪಟ್ಟಣಗಳನ್ನು ಹಾಳುಮಾಡಿ, ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.


ಆ ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಆರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಸುಟ್ಟು ಹೋಗುವವು.


ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ, ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.


ಕೋಟೆಕೊತ್ತಲದ ಪಟ್ಟಣವು ಹಾಳಾಗಿ, ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವುದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವುದು.


ಕೊಯ್ಲಿನ ಕಾಲಕ್ಕೆ ಮೊದಲು ಮೊಗ್ಗು ಬಿಟ್ಟಾದ ಮೇಲೆ, ಹೂವಿನಿಂದ ಹೀಚು ದ್ರಾಕ್ಷಿ ದೋರೆ ಕಾಯಿಯಾಗುವಾಗ, ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕುವನು.


ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.


ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ, ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು.


ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.


ಮನೆಯ ಹೊರಗೆ ಕತ್ತಿಯೂ, ಒಳಗೆ ಭಯವೂ ಇರುವುದು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.


ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ.


ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ಕಸ್ದೀಯರ ಮೇಲೆ ಬೀಳಲಿ! ಬಾಬೆಲಿನ ಸಾಮಾನ್ಯ ಜನರು, ಪ್ರಧಾನರು, ಪಂಡಿತರು, ಇವರನ್ನೆಲ್ಲಾ ಹತಿಸಲಿ!


ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.


ಇಸ್ರಾಯೇಲು ಮೊಂಡ ಹಸುವಿನಂತೆ ಮೊಂಡುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲ ಸ್ಥಳದಲ್ಲಿ ಮೇಯಿಸುವನೋ?


ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ.


ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು”


ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು