Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮದ ಗತಿಗೆ ಹೇಗೆ ತರಲಿ! ಚೆಬೋಯೀವಿುನಂತೆ ಹೇಗೆ ನಾಶಮಾಡಲಿ! ನನ್ನೊಳಗೆ ಮನಸ್ಸು ತಿರುಗಿತು, ಕರುಳು ತೀರಾ ಮರುಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಎಫ್ರಾಯೀಮೇ, ನಿನ್ನನ್ನು ಬಿಟ್ಟುಬಿಡಲು ನನಗೆ ಇಷ್ಟವಿಲ್ಲ. ಇಸ್ರೇಲೇ, ನಿನ್ನನ್ನು ಸಂರಕ್ಷಿಸಲು ನನಗೆ ಇಷ್ಟ. ನಿನ್ನನ್ನು ಅದ್ಮದಂತೆ ಮಾಡಲು ನನಗೆ ಮನಸ್ಸಿಲ್ಲ. ನಿನ್ನನ್ನು ಜೆಬೊಯೀಮಿನಂತೆ ಮಾಡಲು ನನಗೆ ಮನಸ್ಸಿಲ್ಲ. ನಾನು ನನ್ನ ನಿರ್ಧಾರವನ್ನು ಬದಲಾಯಿಸುತ್ತಿದ್ದೇನೆ. ನಿನ್ನ ಮೇಲಿರುವ ನನ್ನ ಪ್ರೀತಿಯು ಆಳವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 11:8
38 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,


ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.


“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.


ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ.


ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.


ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು.


ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯಿಮ್ ಹಾಗೂ ಚೋಗರೆಂಬ ಬೇಲಗದ ರಾಜರು ಹೊರಟು ಅವರಿಗೆದುರಾಗಿ,


ಅವಳ ದಹನದ ಹೊಗೆಯನ್ನು ನೋಡಿ ‘ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಮೊರೆಯಿಡುವರು.


ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ ಸೊದೋಮ್ ಎಂದು, ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು.


ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”


ಕರ್ತನಾದ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.


ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.


ನರಜನ್ಮದವರನ್ನು ಬಾಧಿಸಿ, ವ್ಯಥೆಗೊಳಿಸುವುದು ಆತನಿಗೆ ಇಷ್ಟವಿಲ್ಲ.


ಹೀಗಿರಲು ಸೇನಾಧೀಶ್ವರನಾದ ಯೆಹೋವನು, “ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.


ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.


ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ಆಗ ಜೀವದಿಂದಿದ್ದ ಕೂಸಿನ ನಿಜವಾದ ತಾಯಿ ಕೂಸಿನ ವಿಷಯದಲ್ಲಿ ಕರಳು ಮರುಗಿ ಅರಸನಿಗೆ, “ನನ್ನ ಒಡೆಯಾ ಬೇಡ, ಬದುಕಿರುವ ಕೂಸನ್ನು ಅವಳಿಗೆ ಕೊಟ್ಟುಬಿಡು. ಅದನ್ನು ಕೊಲ್ಲಿಸಬೇಡ” ಎಂದು ಬೇಡಿಕೊಳ್ಳುವಲ್ಲಿ ಎರಡನೆಯವಳು, “ಅದು ನನಗೂ ಬೇಡ, ನಿನಗೂ ಬೇಡ ಕತ್ತರಿಸಲಿ” ಎಂದು ಕೂಗಿದಳು.


ಆದುದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವು, ಕೀರ್ ಹೆರೆಸಿನ ನಿಮಿತ್ತ ನನ್ನ ಅಂತರಂಗವು ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.


ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.


‘ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವುದಿಲ್ಲ; ನೆಡುವೆನು, ಕೀಳುವುದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.


ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು.


ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲನ್ನು ಸ್ವಸ್ಥ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಅಧರ್ಮವೂ, ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ. ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.


ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು


“ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗ ಮತ್ತು ಉಪದ್ರವಗಳನ್ನು ಕಂಡು ಆಶ್ಚರ್ಯಪಡುವರು.


ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.


ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು