Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯದರ್ಶನಗಳನ್ನು ದಯಪಾಲಿಸಿದ್ದೇನೆ. ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡೆಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮತಿಗಳನ್ನು ಹೇಳಿ ಜನರಿಗೆ ಮುನ್ನೆಚ್ಚರಿಕೆ ನೀಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯ ದರ್ಶನಗಳನ್ನು ದಯಪಾಲಿಸಿದ್ದೇನೆ. ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಪ್ರವಾದಿಗಳೊಂದಿಗೆ ಮಾತನಾಡಿದೆನು. ಅವರಿಗೆ ಅನೇಕ ದರ್ಶನಗಳನ್ನು ಕೊಟ್ಟೆನು. ನನ್ನ ಪಾಠಗಳನ್ನು ನಿಮಗೆ ಕಲಿಸುವಂತೆ ಅನೇಕ ಮಾರ್ಗಗಳನ್ನು ಪ್ರವಾದಿಗಳಿಗೆ ತೋರಿಸಿಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮ್ಯಗಳನ್ನು ಜನರಿಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:10
29 ತಿಳಿವುಗಳ ಹೋಲಿಕೆ  

ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, “ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಿಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ” ಎಂದು ಖಂಡಿತವಾಗಿ ಹೇಳಿಸಿದನು.


“ಆಗ ನಾನು, ‘ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೇ?’ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ” ಎಂಬುದಾಗಿ ಅರಿಕೆಮಾಡಿದೆನು.


ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.


ಯೆಹೋವನು ನನಗೆ ಹೀಗೆ ಹೇಳಿದನು, “ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೋ.


“ನಿಮ್ಮ ಪೂರ್ವಿಕರು ಐಗುಪ್ತ ದೇಶದೊಳಗಿಂದ ಹೊರಟ ದಿನ ಮೊದಲುಗೊಂಡು ಈ ದಿನದವರೆಗೂ ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮವರ ಬಳಿಗೆ ಕಳುಹಿಸುತ್ತಾ ಬಂದಿದ್ದೇನೆ, ದಿನ ದಿನವೂ ತಡ ಮಾಡದೆ ಕಳುಹಿಸಿದ್ದೇನೆ.


ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳುವುದು ನನಗೆ ಅನಿವಾರ್ಯವಾಗಿದೆ. ಆದ್ದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳನ್ನೂ ಮತ್ತು ತಿಳಿಯಪಡಿಸಿದ ರಹಸ್ಯಗಳನ್ನೂ ಕುರಿತು ಹೇಳುತ್ತೇನೆ.


“ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;


ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.


ಯೆಹೋವನು ನನಗೆ, “ನೀನು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ದೀಪದ್ರಾಕ್ಷೆಯ ಅಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವನು ಪ್ರೀತಿಸುವ ಪ್ರಕಾರ, ನೀನು ಜಾರನಿಗೆ ಪ್ರಿಯಳೂ, ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ” ಎಂದು ಅಪ್ಪಣೆ ಕೊಟ್ಟನು.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಆಗ ನೀನು ನಿನ್ನ ಸಂಗಡ ಬಂದವರ ಕಣ್ಣೆದುರಿಗೆ ಆ ಮಡಿಕೆಯನ್ನು ಒಡೆದುಬಿಟ್ಟು ಅವರಿಗೆ ಹೀಗೆ ಹೇಳು,


ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.


ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.


ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,


ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು


ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.


“ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು,


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ಏಳು ದಿನಗಳು ನೀವು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕು, ಸ್ವದೇಶಸ್ಥರಾದ ಇಸ್ರಾಯೇಲರೆಲ್ಲರೂ ಪರ್ಣಶಾಲೆಗಳಲ್ಲಿಯೇ ವಾಸವಾಗಿರಬೇಕು.


ನಾನಾದರೋ ನೀನು ಐಗುಪ್ತ ದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು