ಹೋಶೇಯ 12:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವುದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದರೂ ಗಿಲ್ಯಾದಿನಲ್ಲಿ ಅಧರ್ಮ ನೆಲೆಗೊಂಡಿದೆ. ಅದಕ್ಕೆ ದುರ್ಗತಿ ಕಾದಿದೆ. ಗಿಲ್ಗಾಲಿನಲ್ಲಿ ಬಸವನಿಗೆ ಯಜ್ಞಗಳನ್ನು ಅರ್ಪಿಸಲಾಗುತ್ತಿದೆ. ಅಲ್ಲಿನ ಯಜ್ಞವೇದಿಗಳು ಪುಡಿಪುಡಿಯಾಗುವುವು; ಉಳುವ ನೇಗಿಲಿಗೆ ಸಿಕ್ಕುವ ಕಲ್ಲುಕುಪ್ಪೆಗಳಾಗುವುವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದರೆ ಗಿಲ್ಯಾದಿನ ಜನರು ಪಾಪ ಮಾಡಿದ್ದಾರೆ. ಅವರ ಬಳಿಯಲ್ಲಿ ಅನೇಕ ಭಯಂಕರವಾದ ವಿಗ್ರಹಗಳಿವೆ. ಗಿಲ್ಗಾಲಿನಲ್ಲಿ ಬಸವನ ವಿಗ್ರಹಗಳಿಗೆ ಜನರು ಯಜ್ಞವನ್ನರ್ಪಿಸುತ್ತಾರೆ. ಅವರಲ್ಲಿ ಅನೇಕ ಯಜ್ಞವೇದಿಕೆಗಳಿವೆ. ಹೇಗೆ ಉಳಿಮೆ ಮಾಡಿದ ಹೊಲದಲ್ಲಿ ಮಣ್ಣಿನ ಸಾಲುಗಳಿರುತ್ತದೋ ಅದೇ ರೀತಿಯಲ್ಲಿ ಅವರ ಬಳಿಯಲ್ಲಿ ವಿಗ್ರಹಗಳ ಸಾಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ಅಲ್ಲಿನ ಜನರು ಅಯೋಗ್ಯರೇ? ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆಯೇ? ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲು ಕುಪ್ಪೆಯ ಹಾಗಿವೆ, ಎಂದು ಹೇಳಿದನು. ಅಧ್ಯಾಯವನ್ನು ನೋಡಿ |