Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದೇವರು ಪ್ರವಾದಿಯನ್ನು ಕಳುಹಿಸಿ, ಇಸ್ರಯೇಲನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಪ್ರವಾದಿಯ ಮುಖಾಂತರ ಇಸ್ರಯೇಲಿಗೆ ರಕ್ಷಣೆ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; ಪ್ರವಾದಿಯ ಮೂಲಕ ಅದು ರಕ್ಷಿತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ದೇವರು ಇಸ್ರೇಲರನ್ನು ಈಜಿಪ್ಟಿನಿಂದ ಹೊರತರುವದಕ್ಕಾಗಿ ಒಬ್ಬ ಪ್ರವಾದಿಯನ್ನು ಉಪಯೋಗಿಸಿದನು. ಇಸ್ರೇಲರನ್ನು ಪ್ರವಾದಿಯ ಮೂಲಕ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪ್ರವಾದಿಯಿಂದ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಬರಮಾಡಿ, ಆ ಪ್ರವಾದಿಯಿಂದಲೇ ಆತನು ಅವರನ್ನು ಕಾಪಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:13
17 ತಿಳಿವುಗಳ ಹೋಲಿಕೆ  

ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.


ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು. ಮೋಶೆಯನ್ನೂ, ಆರೋನನನ್ನೂ ಮತ್ತು ಮಿರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.


ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.


ಐಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಿಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ, ಆತನು ಮೋಶೆ ಆರೋನರ ಮುಖಾಂತರ ಅವರನ್ನು ಐಗುಪ್ತದಿಂದ ಬಿಡಿಸಿ ಈ ದೇಶದಲ್ಲಿ ನೆಲೆಗೊಳಿಸಿದನು.


ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.


ಅವಳ ದ್ರಾಕ್ಷಿಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ಸುಖ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಯೌವನದಲ್ಲಿ, ಐಗುಪ್ತದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಆಕೆಯು ಮುಳುಗುವಳು.”


ಇಸ್ರಾಯೇಲ್ ಇನ್ನೂ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯಿಟ್ಟು, ಆ ನನ್ನ ಮಗನನ್ನು ಐಗುಪ್ತ ದೇಶದಿಂದ ಕರೆದೆನು.


ಪದ್ದನ್ ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟು ಹೋಗು. ಅಲ್ಲಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೋ.


ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು.


ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು