Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದುದರಿಂದ ಇಸ್ರಯೇಲ್, ನೀನು ದೇವರ ಕಡೆ ತಿರುಗಿಕೋ, ನೀತಿ ಪ್ರೀತಿಗಳಿಗೆ ಅನುಗುಣವಾಗಿ ನಡೆ. ನಿರಂತರವಾಗಿ ದೇವರನ್ನು ನಿರೀಕ್ಷಿಸಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 [ಇಸ್ರಾಯೇಲೇ,] ನೀನು ನಿನ್ನ ದೇವರ ಸಹಾಯದಿಂದ ತಿರುಗಿಕೋ; ನೀತಿಪ್ರೀತಿಗಳನ್ನನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನಿನ್ನ ಯೆಹೋವನ ಬಳಿಗೆ ಹಿಂದಿರುಗಿ ಬಾ. ಆತನಿಗೆ ವಿಧೇಯನಾಗಿರು. ಸರಿಯಾಗಿರುವದನ್ನೇ ಮಾಡು. ಯಾವಾಗಲೂ ನಿನ್ನ ದೇವರ ಮೇಲೆ ಭರವಸವಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ನೀನು ನಿನ್ನ ದೇವರ ಕಡೆಗೆ ತಿರುಗಿಕೋ. ಪ್ರೀತಿಯನ್ನೂ, ನ್ಯಾಯವನ್ನೂ ಪಾಲಿಸು ಮತ್ತು ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:6
39 ತಿಳಿವುಗಳ ಹೋಲಿಕೆ  

ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ನಾನಂತು ಯೆಹೋವನನ್ನು ಎದುರುನೋಡುವೆನು. ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು.


ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.


“ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,


ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.


ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.


“ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ;


ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ.


ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.


ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಹರಿಯಲಿ.


ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.


ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.


ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದ ಹಾಕಿದ್ದಾನೆ. ಏಕೆಂದರೆ ಪ್ರೀತಿ, ಸತ್ಯ, ದೇವಜ್ಞಾನಗಳು ದೇಶದಲ್ಲಿಲ್ಲ.


ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.


ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,


ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.


“ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರುಗಿಕೊಳ್ಳಿರಿ.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.


ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,


ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.


ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.


ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.


ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.


ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.


ಯೆಹೋವನೇ, ನಾನು ನಿನ್ನ ರಕ್ಷಣೆಯ ಮಾರ್ಗವನ್ನು ನಿರೀಕ್ಷಿಸಿಕೊಂಡಿದ್ದೇನೆ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.


ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”


ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು