Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ್ ದೇವತೆಯ ವಿಷಯದಲ್ಲಿ ದೋಷಿಯಾದಾಗ ನಾಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪೂರ್ವದಲ್ಲಿ ಎಫ್ರಯಿಮ್ ಮಾತನಾಡಿದಾಗ ಎಲ್ಲರೂ ನಡುಗುತ್ತಿದ್ದರು. ಅದು ಇಸ್ರಯೇಲಿನಲ್ಲಿ ಅಷ್ಟು ಉನ್ನತ ಸ್ಥಿತಿಗೆ ಏರಿತ್ತು. ಆದರೆ ಅದು ಬಾಳ್ ದೇವತೆಗೆ ಆರಾಧನೆ ಸಲ್ಲಿಸಿದ್ದರಿಂದ ಪಾಪಕಟ್ಟಿಕೊಂಡು ಪತನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ್‍ದೇವತೆಯ ವಿಷಯದಲ್ಲಿ ದೋಷಿಯಾದಾಗ ಸತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಎಫ್ರಾಯೀಮ್ ಇಸ್ರೇಲರೊಳಗೆ ತನ್ನನ್ನು ತಾನೇ ಮುಖ್ಯಸ್ಥನನ್ನಾಗಿ ಮಾಡಿಕೊಂಡನು. ಎಫ್ರಾಯೀಮನು ಮಾತನಾಡಿದಾಗ ಜನರು ಹೆದರಿ ನಡುಗಿದರು. ಆದರೆ ಅವನು ಪಾಪದಲ್ಲಿ ಬಿದ್ದನು. ಬಾಳನನ್ನು ಪೂಜಿಸಲು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಪೂರ್ವದಲ್ಲಿ ಎಫ್ರಾಯೀಮು ಮಾತನಾಡುವಾಗ, ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು. ಆದರೆ ಬಾಳನ ಆರಾಧನೆಯಲ್ಲಿ ಅವನು ಅಪರಾಧಿಯಾಗಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:1
26 ತಿಳಿವುಗಳ ಹೋಲಿಕೆ  

ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.


ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.


ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸನ್ನಾಗಿ ಮಾಡಿದನು.


ಎಫ್ರಾಯೀಮ್ಯರು ಒಟ್ಟಿಗೆ ಸೇರಿಕೊಂಡು ಯೊರ್ದನ್ ನದಿಯನ್ನು ದಾಟಿ ಉತ್ತರದಿಕ್ಕಿನಲ್ಲಿರುವ ಚಾಫೋನಿಗೆ ಹೋಗಿ ಯೆಪ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ” ಅಂದರು.


ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ, “ನೀನು ಹೀಗೆ ಯಾಕೆ ಮಾಡಿದಿ? ಮಿದ್ಯಾನ್ಯರೊಡನೆ ಯುದ್ಧಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರಕೋಪದಿಂದ ಜಗಳವಾಡಿದರು.


ಆಗ ಯೆಹೋವನು ಯೆಹೋಶುವನಿಗೆ “ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು.


ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.


ಎಫ್ರಾಯೀಮ್ ಕುಲದ ನೂನನ ಮಗನಾದ ಹೋಶೇಯ,


ಆ ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು.


ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.


ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.


ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಜನರು ಕಾದುಕೊಂಡಿದ್ದು ನನ್ನ ಮಾತಿಗೆ ಕಿವಿಗೊಟ್ಟು, ನನ್ನ ಆಲೋಚನೆಯನ್ನು ತಿಳಿದುಕೊಳ್ಳಬೇಕೆಂದು ಮೌನವಾಗಿದ್ದರು.


ನಾನು ಮಾತನಾಡಿದ ಮೇಲೆ ಮತ್ತೆ ಅವರು ಮಾತನಾಡುತ್ತಿರಲಿಲ್ಲ, ನನ್ನ ವಚನವೃಷ್ಟಿಯು ಅವರ ಮೇಲೆ ಬೀಳುತ್ತಿತ್ತು,


ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.


ನನ್ನ ಅಪ್ಪಣೆಯಿಲ್ಲದೆ ರಾಜರನ್ನು ನೇಮಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ತಮ್ಮ ಬೆಳ್ಳಿ ಮತ್ತು ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.


ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.


ಈಗ ಅವಳೊಂದಿಗೆ ವ್ಯಭಿಚಾರ ಮಾಡಿದವರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು