Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; ಕೋಪೋದ್ರೇಕನಾಗಿ ಅವರನ್ನು ತೆಗೆದು ಹಾಕಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಷ್ಟವಿಲ್ಲದೆ ಸಿಟ್ಟಿನಿಂದ ನಿನಗೆ ರಾಜನನ್ನು ಕೊಟ್ಟೆ. ಈಗ ಕಡುಕೋಪದಿಂದ ಆ ರಾಜರನ್ನು ತೆಗೆದುಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; ಕೋಪೋದ್ರೇಕನಾಗಿ ತೆಗೆದುಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ಕೋಪಗೊಂಡೆನು ಮತ್ತು ಒಬ್ಬ ಅರಸನನ್ನು ಕೊಟ್ಟೆನು. ನಾನು ಹೆಚ್ಚಾಗಿ ಕೋಪಗೊಂಡಾಗ ಅವನನ್ನು ತೆಗೆದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು ಮತ್ತು ನನ್ನ ರೌದ್ರದಲ್ಲಿ ಅವನನ್ನು ತೆಗೆದುಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:11
18 ತಿಳಿವುಗಳ ಹೋಲಿಕೆ  

ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ, ನಮಗೊಬ್ಬ ಅರಸನನ್ನು ನೇಮಿಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದುದರಿಂದ ನೀವು ಕುಲ ಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ” ಎಂದು ಅಪ್ಪಣೆ ಮಾಡಿದನು.


“ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ. ರಾಜನಾದರೋ ನಮಗಾಗಿ ಏನು ಮಾಡಿಯಾನು?” ಎಂದು ಈಗ ಅವರು ಅಂದುಕೊಳ್ಳಬೇಕಾಯಿತು.


ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.


ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.


ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾನೆ.


ಸಮಾರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮರದ ಚಕ್ಕೆಗೆ ಸಮಾನನಾಗಿದ್ದಾನೆ.


ಸಮುವೇಲನು ಇಸ್ರಾಯೇಲ್ಯರನ್ನು ಮಿಚ್ಪೆಗೆ ಕರೆಯಿಸಿ ಯೆಹೋವನ ಸನ್ನಿಧಿಯಲ್ಲಿ ಸೇರಿಸಿಕೊಂಡನು.


ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಮಾತನ್ನು ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಇಸ್ರಾಯೇಲರ ಅರಸುತನದಿಂದ ನಿವಾರಿಸಿದ್ದಾನೆ” ಎಂದು ಹೇಳಿ ತಿರುಗಿಕೊಂಡು ಹೊರಡಲು


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.


ನನ್ನ ಅಪ್ಪಣೆಯಿಲ್ಲದೆ ರಾಜರನ್ನು ನೇಮಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ತಮ್ಮ ಬೆಳ್ಳಿ ಮತ್ತು ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.


ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ, “ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಆಲಿಸಿ ನಿಮಗೊಬ್ಬ ಅರಸನನ್ನು ನೇಮಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು