Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳೆಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಸಮಾಧಿಯಿಂದ ಅವರನ್ನು ರಕ್ಷಿಸುವೆನು; ಮರಣದಿಂದ ಅವರನ್ನು ಪಾರುಮಾಡುವೆನು. ಮರಣವೇ, ನಿನ್ನ ವ್ಯಾಧಿಗಳೆಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ ನಿನ್ನ ಉಪದ್ರವ ಎಲ್ಲಿ? ಪಾತಾಳವೇ ನಿನ್ನ ವಿನಾಶವೆಲ್ಲಿ? “ಅನುಕಂಪವು ನನ್ನಿಂದ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:14
32 ತಿಳಿವುಗಳ ಹೋಲಿಕೆ  

ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.


ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, ನನ್ನನ್ನು ಸ್ವೀಕಾರಮಾಡುವನು. ಸೆಲಾ


ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ.


ದೇವರು ಒಂದು ವೇಳೆ ಆ ಮನುಷ್ಯನನ್ನು ಮೆಚ್ಚಿ ಈಡು ದೊರಕುವಂತೆ ಮಾಡಿ, ‘ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು’ ಎಂದು ಅಪ್ಪಣೆಕೊಟ್ಟರೆ,


ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.


ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ.


ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.


ಇಸ್ರಾಯೇಲರ ನಿರಂತರ ಆಧಾರವಾಗಿ ಇರುವವನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಏಕೆಂದರೆ ವಾಗ್ದಾನ ಮಾಡಿದ ಮಾತನ್ನು ನಡೆಸದೆ ಬಿಡುವವನಲ್ಲ” ಎಂದು ಹೇಳಿದನು.


ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.


ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.


ಏಕೆಂದರೆ, ಈ ದೇಹವೆಂಬ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ; ಬದಲಾಗಿ ಅದರ ಮೇಲೆ ಧರಿಸಿಕೊಳ್ಳಬೇಕೆಂಬುದೇ. ಆದ್ದರಿಂದ ನಶ್ವರವಾದದ್ದು ಅಳಿದುಹೋಗಿ ಅಮರವಾದದ್ದು ಉಳಿಯುವಂತೆ ಅಪೇಕ್ಷಿಸುತ್ತೇವೆ.


ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.


“ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”


ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.


ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.


ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.


ಆಗ ನಾನು ನೋಡಲು ಇಗೋ, ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು.


ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಮುಂಜಾನೆಯಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!


ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ಮತ್ತು ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇಮಿಸುವಾತನೂ, ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ, ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ,


ಆಗ ಆತನು ನನಗೆ, “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ‘ಓ ಶ್ವಾಸವೇ,’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಚತುರ್ದಿಕ್ಕುಗಳಿಂದ ಬೀಸಿ, ಈ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಊದು.’”


ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿದೆ, ಅದರ ಮುಂದೆ ಭಯವು ಕುಣಿದಾಡುವುದು.


ಒಬ್ಬನ ಐಶ್ವರ್ಯವೂ, ಗೃಹವೈಭವವೂ ವೃದ್ಧಿಯಾದಾಗ ಕಳವಳಪಡಬೇಡ.


ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ; ಆತನನ್ನು ಆಶ್ರಯಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು