ಹೋಶೇಯ 13:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಈಗ ಎಫ್ರಯಿಮರ ಪಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರು ಬೆಳ್ಳಿಬಂಗಾರವನ್ನು ಕರಗಿಸಿ ಇಷ್ಟಬಂದಂತೆ ಬೊಂಬೆಗಳನ್ನು ಮಾಡಿಕೊಂಡಿದ್ದಾರೆ. ಅವೆಲ್ಲವು ಶಿಲ್ಪಿಗಳ ಕೈಕೆಲಸವೇ ಹೊರತು ಮತ್ತೇನು ಅಲ್ಲ. ಇಂಥ ವಿಗ್ರಹಗಳನ್ನು ಪೂಜೆಗಾಗಿ ಪ್ರತಿಷ್ಠಾಪನೆಮಾಡುತ್ತಾರೆ. ಬುದ್ಧಿಜೀವಿಗಳಾದ ಇವರು ಬಸವನಿಗೆ ಮುದ್ದಿಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈಗ ಇಸ್ರೇಲರು ಹೆಚ್ಚೆಚ್ಚಾಗಿ ಪಾಪ ಮಾಡುತ್ತಿರುತ್ತಾರೆ. ತಮಗಾಗಿ ವಿಗ್ರಹಗಳನ್ನು ಮಾಡಿಕೊಳ್ಳುತ್ತಾರೆ. ಅಕ್ಕಸಾಲಿಗರು ಬೆಳ್ಳಿಯಿಂದ ವಿಗ್ರಹಗಳನ್ನು ಮಾಡುವರು. ತಾವು ಮಾಡಿದ ಮೂರ್ತಿಗಳೊಂದಿಗೆ ಮಾತನಾಡುವರು. ಆ ವಿಗ್ರಹಗಳಿಗೆ ಯಜ್ಞವನ್ನರ್ಪಿಸುವರು. ಬಂಗಾರದ ಬಸವನ ವಿಗ್ರಹಕ್ಕೆ ಮುದ್ದು ಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ. ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ, ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅದೆಲ್ಲವೂ ಕಮ್ಮಾರರ ಕೈಕೆಲಸವೇ. ಅವರು ನರಬಲಿಯನ್ನು ಅರ್ಪಿಸುತ್ತಾರೆ, ಬಸವನ ವಿಗ್ರಹಕ್ಕೆ ಮುದ್ದಿಡುತ್ತಾರೆ,” ಎಂದು ಜನರು ಅವರ ಬಗ್ಗೆ ಹೇಳುತ್ತಾರೆ. ಅಧ್ಯಾಯವನ್ನು ನೋಡಿ |