ಹೋಶೇಯ 13:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಸೀಳಿಬಿಡುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಹರಿದುಬಿಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲೆ ಬೀಳುವೆನು. ಅವರ ಎದೆಯನ್ನು ಬಗಿದುಹಾಕುವೆನು. ಮೃಗರಾಜರಂತೆ ಅವರನ್ನು ನುಂಗಿಬಿಡುವೆನು. ಕಾಡುಮೃಗದಂತೆ ಅವರನ್ನು ಸೀಳಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಬಗಿದುಹಾಕುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಸೀಳಿಬಿಡುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲರಗಿ ಅವರನ್ನು ಗಾಯಗೊಳಿಸಿ ಅವರ ಎದೆಯನ್ನು ಸೀಳಿ ಬಿಡುವೆನು. ನಾನು ಸಿಂಹದಂತೆಯೂ ಕ್ರೂರ ಮೃಗದಂತೆಯೂ ಅವರನ್ನು ಸೀಳಿ ತಿಂದುಬಿಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾನು ಮರಿಯನ್ನು ಕಳೆದುಕೊಂಡ ಕರಡಿಯಂತೆ ಅವರನ್ನು ಎದುರುಗೊಳ್ಳುವೆನು. ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ನಾನು ಸಿಂಹದ ಹಾಗೆ ಅವರನ್ನು ನುಂಗುವೆನು. ಕಾಡುಮೃಗವು ಅವರನ್ನು ಸೀಳಿ ಹಾಕುವುದು. ಅಧ್ಯಾಯವನ್ನು ನೋಡಿ |