Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 14:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನನ್ನು ಸೇರಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 14:1
26 ತಿಳಿವುಗಳ ಹೋಲಿಕೆ  

ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.


ಯೆಹೋವನು, “ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ, ನೀನು ಇನ್ನು ದಿಕ್ಕು ದೆಸೆಗಳಿಲ್ಲದೆ ನರಳುವುದಿಲ್ಲ.


ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು ನಿನ್ನನ್ನು ರಕ್ಷಿಸುವರು?


ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ!


ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇಸ್ರಾಯೇಲೂ ಮತ್ತು ಎಫ್ರಾಯೀಮೂ ತಮ್ಮ ದುರ್ಮಾರ್ಗದಲ್ಲಿ ಎಡವಿ ಬೀಳುವವು; ಯೆಹೂದವೂ ಅವುಗಳೊಂದಿಗೆ ಬೀಳುವುದು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವಿ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ,


ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ.


ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.


ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.


ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?


ಹಜಾಯೇಲನು ಅವನನ್ನು, “ನನ್ನ ಒಡೆಯಾ, ಯಾಕೆ ಅಳುತ್ತಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಾಯೇಲರಿಗೆ ಎಷ್ಟು ಕೇಡು ಮಾಡುವಿ ಎಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ. ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವಿ. ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ. ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ” ಎಂದು ಉತ್ತರಕೊಟ್ಟನು.


ನಿನ್ನ ಉತ್ತರಕ್ಕೆ ತನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ನಿನ್ನ ದಕ್ಷಿಣಕ್ಕೆ ನಿನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.


ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನೆಟ್ಟಿರುವುದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.


ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು