Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈಗ ಅವಳೊಂದಿಗೆ ವ್ಯಭಿಚಾರ ಮಾಡಿದವರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವಳ ನಲ್ಲರ ಕಣ್ಣೆದುರಿಗೆ ಅವಳ ಲಜ್ಜೆಗೇಡಿತನವನ್ನು ಬಯಲುಮಾಡುವೆನು. ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈಗ ಅವಳ ವಿುಂಡರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈಗ ನಾನು ಆಕೆಯನ್ನು ಬಟ್ಟೆಯನ್ನು ಬಿಚ್ಚಿಹಾಕುವೆನು. ಆಕೆಯ ಬೆತ್ತಲೆತನವನ್ನು ಆಕೆಯ ಪ್ರಿಯತಮರೆಲ್ಲರೂ ನೋಡುವರು. ನನ್ನ ಕೈಯೊಳಗಿಂದ ಯಾರೂ ಆಕೆಯನ್ನು ರಕ್ಷಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈಗ ಅವಳ ತುಚ್ಚತನವನ್ನು, ಅವಳ ಪ್ರೇಮಿಗಳ ಕಣ್ಣುಗಳ ಮುಂದೆ ಬಯಲು ಪಡಿಸುವೆನು. ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:10
19 ತಿಳಿವುಗಳ ಹೋಲಿಕೆ  

ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು, ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬರಿದುಮಾಡಿ ಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ವ್ಯಭಿಚಾರವು, ಹೌದು, ನಿನ್ನ ದುಷ್ಕರ್ಮವು ಮತ್ತು ವ್ಯಭಿಚಾರವೂ ಬಯಲಿಗೆ ಬರುವುದು.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.


ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ಕಿತ್ತು, ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸುವೆನು ಅವಳನ್ನು ಬೆಂಗಾಡಾಗಿಸಿ, ಮರುಭೂಮಿಯ ಸ್ಥಿತಿಗೆ ತಂದು, ನೀರಡಿಕೆಯಿಂದ ಸಾಯಿಸುವೆನು.


ನಿನ್ನ ಉಡುಗೆಯನ್ನು ನಿನ್ನ ಕಣ್ಣಮುಂದೆಯೇ ಕೀಳಿಸುವೆನು, ನಿನಗೆ ಅವಮಾನವಾಗುವುದು.


“ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.


ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡುನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು.


ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.


ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.


ಕಳ್ಳರ ಗುಂಪು ಒಬ್ಬನಿಗೆ ಹೊಂಚು ಹಾಕುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು, ಶೆಕೆಮಿಗೆ ಯಾತ್ರೆ ಹೋಗುವವರನ್ನು ದೋಚಿ ಕೊಂದುಹಾಕುತ್ತಾರೆ; ಹೌದು, ಘೋರಕೃತ್ಯವನ್ನು ನಡೆಸುತ್ತಾರೆ.


ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳನಿಗಾಗಿ ಕೊಟ್ಟು ಬಿಟ್ಟಿದ್ದಾರಲ್ಲಾ?” ಎಂದು ಹೇಳಿದನು.


ನೀನು ಪೂಜಾ ಸ್ಥಾನಗಳನ್ನು ಕಟ್ಟಿಕೊಂಡು ನಿನ್ನ ಚಿತ್ರವಿಚಿತ್ರ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ ಅಲ್ಲಿ ವ್ಯಭಿಚಾರ ನಡಿಸಿದೆ. ಇದು ನಡೆಯತಕ್ಕದ್ದಲ್ಲ. ಆಗಬಾರದಾಗಿತ್ತು.


ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ, ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!” ಇದು ಕರ್ತನಾದ ಯೆಹೋವನ ನುಡಿ.


ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ.


ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ್ ದೇವತೆಯ ವಿಷಯದಲ್ಲಿ ದೋಷಿಯಾದಾಗ ನಾಶವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು