Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಸಿಂಗರಿಸಿಕೊಂಡು ವಿುಂಡರ ಹಿಂದೆಹೋಗಿ ಬಾಳ್‍ದೇವತೆಗಳ ಉತ್ಸವದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಆಕೆಯು ಬಾಳನ ಸೇವೆಮಾಡಿದ್ದುದರಿಂದ ನಾನು ಆಕೆಯನ್ನು ಶಿಕ್ಷಿಸುವೆನು. ಬಾಳನಿಗೆ ಆಕೆ ಧೂಪ ಹಾಕಿದಳು. ಆಕೆ ವಸ್ತ್ರಾಭರಣಗಳಿಂದ ಭೂಷಿತಳಾಗಿ ಮೂಗುತಿಯನ್ನು ಧರಿಸಿಕೊಂಡು ತನ್ನ ಪ್ರೇಮಿಗಳ ಬಳಿಗೆ ಹೋದಳು. ನನ್ನನ್ನು ಮರೆತುಬಿಟ್ಟಳು.” ಇದು ಯೆಹೋವನು ಹೇಳಿದ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಅವಳ ಪ್ರೇಮಿಗಳ ಹಿಂದೆ ಹೋಗಿ, ಬಾಳ್ ದೇವತೆಗಳಿಗೆ ಧೂಪ ಸುಟ್ಟ ದಿವಸಗಳಿಗಾಗಿ ನಾನು ಅವಳನ್ನು ದಂಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:13
44 ತಿಳಿವುಗಳ ಹೋಲಿಕೆ  

ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.


ಇಸ್ರಾಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ್ ದೇವತೆಯ ವಿಷಯದಲ್ಲಿ ದೋಷಿಯಾದಾಗ ನಾಶವಾಯಿತು.


ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.


ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,


ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.


ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.


ಪರ್ವತಾಗ್ರಗಳಲ್ಲಿ ಯಜ್ಞ ಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪ ಹಾಕುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವುದರಿಂದ ಅವುಗಳ ಕೆಳಗೆ ಇವುಗಳನ್ನು ನಡೆಸುತ್ತಾರೆ. ಹೀಗಿರಲು ನನ್ನ ಜನರೇ, ನಿಮ್ಮ ಕುಮಾರಿಯರು ವ್ಯಭಿಚಾರಿಗಳಾಗಿ ನಡೆಯುವುದೂ, ನಿಮ್ಮ ವಧುಗಳು ವ್ಯಭಿಚಾರ ಮಾಡುವುದೂ ಏನಾಶ್ಚರ್ಯ?


ಅವಳು ತನ್ನೊಂದಿಗೆ ವ್ಯಭಿಚಾರ ಮಾಡಿದವರನ್ನು ಅನುಸರಿಸಿ ಹೋದರೂ ಅವರು ಸಿಕ್ಕುವುದಿಲ್ಲ. ಆಗ ಅವಳು, “‘ನಾನು ಮದುವೆಯಾದ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು’ ಅಂದುಕೊಳ್ಳುವಳು.


ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’”


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನನ್ನು ಬೆನ್ನಿನ ಹಿಂದೆ ಮರೆಮಾಡಿ, ಮರೆತುಬಿಟ್ಟಿದ್ದರಿಂದ ನಿನ್ನ ದುಷ್ಕರ್ಮದ ಮತ್ತು ವ್ಯಭಿಚಾರದ ಫಲವನ್ನು ನೀನೇ ಅನುಭವಿಸಬೇಕು.”


ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.


ಮತ್ತು ನಾನು ನನ್ನ ಬೆಳ್ಳಿ ಬಂಗಾರದಿಂದ ನಿನಗೆ ಮಾಡಿಸಿಕೊಟ್ಟಿದ್ದ ನಿನ್ನ ಚಂದವಾದ ಆಭರಣಗಳನ್ನು ನೀನು ತೆಗೆದು ಅವುಗಳಿಂದ ಪುರುಷ ಮೂರ್ತಿಗಳನ್ನು ರೂಪಿಸಿಕೊಂಡು ಅವುಗಳೊಡನೆ ವ್ಯಭಿಚಾರ ಮಾಡಿದೆ.


ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.


ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ. ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟಿದ್ದಿ.


ಐಗುಪ್ತದಲ್ಲಿ ಮಹತ್ತುಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ,


ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು, ಆತನ ನಡೆಸುವಿಕೆಗೆ ಕಾದಿರದೆ,


ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದ ಅದ್ಭುತಗಳನ್ನು ಮರೆತುಬಿಟ್ಟರು.


ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವುದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವುದು.


ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ಹೀಗೆ ಯೇಹುವು ಇಸ್ರಾಯೇಲರಲ್ಲಿ ಬಾಳ್ ದೇವತೆಯ ಪೂಜೆಯನ್ನು ನಿಲ್ಲಿಸಿದನು.


ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.


ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್‌ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.


ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.


ಇಸ್ರಾಯೇಲರೇ, ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ಸ್ಮರಿಸಲಿಲ್ಲ; ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ.


ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ.


ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”


ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು” ಎಂದು ಯೆಹೋವನು ಹೇಳುತ್ತಾನೆ.


ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆನು.


ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು” ಇದು ಯೆಹೋವನ ನುಡಿ.


ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ; ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ.


ವೃದ್ಧರು ಇನ್ನು ಚಾವಡಿಯಲ್ಲಿ ಸೇರರು, ಯುವಕರು ಇನ್ನು ವಾದ್ಯಬಾರಿಸರು.


ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು