ಹೋಶೇಯ 2:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ, ನೆಲದ ಕ್ರಿಮಿಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲು, ಕತ್ತಿ ಮತ್ತು ಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ, ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆ ದಿನಗಳಲ್ಲಿ ನನ್ನ ಜನರಿಗೆ ಹಾನಿಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ನೆಲದ ಕ್ರಿವಿುಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲುಕತ್ತಿಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಆ ಸಮಯದಲ್ಲಿ ನಾನು ಇಸ್ರೇಲರಿಗೋಸ್ಕರವಾಗಿ ಅಡವಿಯ ಮೃಗಗಳೊಂದಿಗೂ ಆಕಾಶದ ಪಕ್ಷಿಗಳೊಂದಿಗೂ ನೆಲದ ಮೇಲೆ ಹರಿದಾಡುವ ಜಂತುಗಳೊಂದಿಗೂ ಒಡಂಬಡಿಕೆ ಮಾಡುವೆನು. ನಾನು ಯುದ್ಧದ ಆಯುಧ, ಬಿಲ್ಲು, ಖಡ್ಗಗಳನ್ನು ತುಂಡು ಮಾಡುವೆನು. ಆ ದೇಶದೊಳಗೆ ಯಾವ ಆಯುಧವೂ ಇರದು. ಆಗ ಇಸ್ರೇಲಿನ ಜನರು ನಿಶ್ಟಿಂತೆಯಿಂದ ಮಲಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ, ಆಕಾಶದ ಪಕ್ಷಿಗಳ ಮತ್ತು ಭೂಮಿಯ ಕ್ರಿಮಿಗಳ ಸಂಗಡ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ, ಖಡ್ಗವನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದುಹಾಕಿ, ಅವರೆಲ್ಲರೂ ಸುರಕ್ಷಿತರಾಗಿ ಮಲಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿ |