ಹೋಶೇಯ 2:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ದಿನದಲ್ಲಿ ಯೆಹೋವನು, “ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು. ಬೇಡುವ ಆಕಾಶಕ್ಕೆ ನಾನು ಒಲಿಯಲು, ಬೇಡುವ ಭೂಮಿಗೆ ಅದು ಒಲಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನದಂದು ಪ್ರೀತಿಸುವೆನು ನಿನ್ನನು; ಆಲಿಸುವೆನು ಆಗಸದ ಮೊರೆಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು; ಬೇಡುವ ಆಕಾಶಕ್ಕೆ ನಾನು ಒಲಿಯಲು ಬೇಡುವ ಭೂವಿುಗೆ ಅದು ಒಲಿಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಗ ನಾನು ನಿನಗೆ ಪ್ರತಿಕ್ರಿಯೆ ತೋರ್ಪಡಿಸುವೆನು.” ಇದು ಯೆಹೋವನು ಹೇಳಿದ ಮಾತು: “ನಾನು ಆಕಾಶದೊಂದಿಗೆ ಮಾತಾಡಲು ಅದು ಭೂಮಿಯ ಮೇಲೆ ಮಳೆಗರೆಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಆ ದಿವಸಗಳಲ್ಲಿ, ನಾನು ಕೇಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಆಕಾಶಗಳನ್ನು ಕೇಳುವೆನು. ಅವು ಭೂಮಿಯನ್ನು ಕೇಳುವುವು. ಅಧ್ಯಾಯವನ್ನು ನೋಡಿ |