Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬೇಡುವ ಧಾನ್ಯ, ದ್ರಾಕ್ಷಾರಸ, ತೈಲಗಳಿಗೆ ಭೂಮಿಯು ಒಲಿಯುವುದು, ಬೇಡುವ ಇಜ್ರೇಲಿಗೆ ಅವು ಒಲಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗಸವು ಆಲಿಸುವುದು ಭೂಮಿಯ ಮೊರೆಯನು ಇವು ಆಲಿಸುವುವು ಇಸ್ರಯೇಲಿನ ಮೊರೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬೇಡುವ ಧಾನ್ಯದ್ರಾಕ್ಷಾರಸತೈಲಗಳಿಗೆ ಭೂವಿುಯು ಒಲಿಯುವದು, ಬೇಡುವ ಇಜ್ರೇಲಿಗೆ ಅವು ಒಲಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಭೂಮಿಯು ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕೊಡುವದು. ಇಜ್ರೇಲಿನ ಅವಶ್ಯಕತೆಗಳನ್ನು ಅವು ದೊರಕಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಭೂಮಿಯು ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೇಳುವುವು. ಅವು ಇಜ್ರೆಯೇಲಿಗೆ ಒಲಿಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:22
8 ತಿಳಿವುಗಳ ಹೋಲಿಕೆ  

ಅವರ ಬಿನ್ನಹವನ್ನು ಯೆಹೋವನು ಲಾಲಿಸಿ ಅವರಿಗೆ ಹೀಗೆ ಹೇಳಿದನು: “ಇಗೋ, ನಾನು ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ಅವುಗಳಿಂದ ನಿಮಗೆ ತೃಪ್ತಿಯಾಗುವುದು. ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡುವುದಿಲ್ಲ.


ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.


ಯೆಹೋವನು ಅವನನ್ನು ಕುರಿತು, “ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹು ವಂಶದವರಿಗೆ ಮುಯ್ಯಿ ತೀರಿಸಿ ಇಸ್ರಾಯೇಲ್ ಜನಾಂಗವನ್ನು ನಿರ್ನಾಮ ಮಾಡುವೆನು.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.


ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು.


ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.


ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.


ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು