Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ಕಿತ್ತು, ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸುವೆನು ಅವಳನ್ನು ಬೆಂಗಾಡಾಗಿಸಿ, ಮರುಭೂಮಿಯ ಸ್ಥಿತಿಗೆ ತಂದು, ನೀರಡಿಕೆಯಿಂದ ಸಾಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಲ್ಲವಾದರೆ ಅವಳನ್ನು ನಗ್ನವಾಗಿಸಿ (ಹುಟ್ಟಿದಾಗ ಇದ್ದಂತೆ) ಬೆತ್ತಲೆಯಾಗಿ ನಿಲ್ಲಿಸುವೆನು. ಅವಳನ್ನು ಬೆಂಗಾಡನ್ನಾಗಿ ಮಾಡಿ, ಮರುಭೂಮಿಯಂತೆ ಮಾರ್ಪಡಿಸಿ, ನೀರಡಿಕೆಯಿಂದ ಸಾಯುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಲ್ಲವಾದರೆ ನಾನು ಅವಳ ಬಟ್ಟೆಯನ್ನು ಕಿತ್ತು ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸಿಬಿಟ್ಟು ಕಾಡನ್ನಾಗಿ ಮಾಡಿ ಮರುಭೂವಿುಯ ಸ್ಥಿತಿಗೆ ತಂದು ನೀರಡಿಕೆಯಿಂದ ಸಾಯಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಕೆ ವ್ಯಭಿಚಾರ ಮಾಡುವದನ್ನು ನಿಲ್ಲಿಸದೆ ಹೋದರೆ ನಾನು ಆಕೆಯನ್ನು ಬೆತ್ತಲೆ ಮಾಡಿ, ಆಕೆ ಜನ್ಮ ತಾಳಿದಾಗ ಹೇಗೆ ಇದ್ದಳೋ ಹಾಗೆ ಮಾಡುವೆನು. ಆಕೆಯ ಜನರನ್ನು ಆಕೆಯಿಂದ ತೊಲಗಿಸಿ ಆಕೆಯನ್ನು ಒಣ ಮರುಭೂಮಿಯಂತೆ ಬೆಂಗಾಡಾಗಿ ಮಾಡುವೆನು. ಆಕೆ ಬಾಯಾರಿ ಸಾಯುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ತೆಗೆದು, ಅವಳು ಹುಟ್ಟಿದ ದಿವಸದಲ್ಲಿದ್ದ ಹಾಗೆ ಅವಳನ್ನು ಬೆತ್ತಲೆ ಮಾಡುತ್ತೇನೆ. ಅವಳನ್ನು ಮರುಭೂಮಿಯಂತೆ ಮಾಡಿ, ಅವಳನ್ನು ಒಣಗಿದ ಭೂಮಿಯಂತೆ ಇಟ್ಟು, ದಾಹದಿಂದ ಅವಳನ್ನು ಕೊಲ್ಲುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:3
27 ತಿಳಿವುಗಳ ಹೋಲಿಕೆ  

ಈ ನಿನ್ನ ಅಸಹ್ಯಕಾರ್ಯಗಳನ್ನೂ, ವ್ಯಭಿಚಾರವನ್ನು ನೀನು ಪದೇ ಪದೇ ನಡೆಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.


ಈಗ ಅದು ನೀರಿಲ್ಲದೆ ಬೆಂಗಾಡಿನಲ್ಲಿ ನಾಟಿಕೊಂಡಿದೆ.


“ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.


ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.


ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.


ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, “ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.


ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು. ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.


ನಿನ್ನ ಉಡುಗೆಯನ್ನು ನಿನ್ನ ಕಣ್ಣಮುಂದೆಯೇ ಕೀಳಿಸುವೆನು, ನಿನಗೆ ಅವಮಾನವಾಗುವುದು.


ಬಹು ಮಂದಿ ಮಂದೆಗಾರರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವತ್ತನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.


ನಾನು ನೋಡಲಾಗಿ ಫಲವತ್ತಾದ ಭೂಮಿಯು ಕಾಡಾಗಿತ್ತು, ಅಯ್ಯೋ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದುಹೋಗಿದ್ದವು.


ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?


‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.


ನಿನ್ನ ಬೆತ್ತಲೆತನವು ಬಯಲಿಗೆ ಬಂದು, ನೀನು ನಾಚಿಕೆಗೀಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.


ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.


ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, “ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ” ಎಂದು ಮೊರೆಯಿಡಲು


ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?” ಎಂದರು.


ಈಗ ಅವಳೊಂದಿಗೆ ವ್ಯಭಿಚಾರ ಮಾಡಿದವರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.


ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.


ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ, ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು