ಹೋಶೇಯ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವರ ತಾಯಿ ವೇಶ್ಯೆಯಾಗಿದ್ದಾಳೆ. ಲಜ್ಜೆಗೆಟ್ಟ ಹೆಂಗಸಾಗಿ ವರ್ತಿಸಿದ್ದಾಳೆ. ‘ನನಗೆ ಅನ್ನಪಾನ, ಉಣ್ಣೆ ಉಡಿಗೆ, ಎಣ್ಣೆತೈಲ, ಪಾಯಸಪಾನಕಗಳನ್ನು ಕೊಡುವಂಥ ನಲ್ಲರ ಹಿಂದೆ ಹೋಗುವೆನು’ ಎಂದುಕೊಂಡಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರ ತಾಯಿಯು ಸೂಳೆತನ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ; ನನಗೆ ಬೇಕಾದ ಅನ್ನಪಾನಗಳನ್ನೂ ಉಣ್ಣೆನಾರುಗಳನ್ನೂ ತೈಲವನ್ನೂ ಪಾಯಸ ಪಾನಕಗಳನ್ನೂ ನನಗೆ ಕೊಡುವ ನನ್ನ ವಿುಂಡರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವರ ತಾಯಿಯು ವೇಶ್ಯೆಯಂತೆ ವರ್ತಿಸಿದಳು. ತಾನು ನಡಿಸಿದ ಕೃತ್ಯಗಳಿಗಾಗಿ ಆಕೆ ನಾಚಿಕೆಪಡಬೇಕು. ಆಕೆಯು ಹೀಗೆಂದುಕೊಳ್ಳುತ್ತಿದ್ದಾಳೆ, ‘ನಾನು ನನ್ನ ಪ್ರಿಯತಮರ ಬಳಿಗೆ ಹೋಗುವೆನು. ಅವರು ನನಗೆ ಅನ್ನ ನೀರನ್ನು ಕೊಡುವರು. ನನಗೆ ಉಣ್ಣೆಯನ್ನೂ, ನಾರುಮಡಿಯನ್ನೂ ಕೊಡುವರು. ದ್ರಾಕ್ಷಾರಸ ಮತ್ತು ಆಲೀವ್ ಎಣ್ಣೆಯನ್ನೂ ಕೊಡುವರು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರ ತಾಯಿ ವಿಶ್ವಾಸದ್ರೋಹಿ ಮತ್ತು ಅವಮಾನಕರವಾಗಿ ಅವರನ್ನು ಗರ್ಭಧರಿಸಿದ್ದಾರೆ. ಅವಳು, ‘ನನಗೆ ನನ್ನ ಅನ್ನಪಾನ, ನನ್ನ ಉಣ್ಣೆ ಮತ್ತು ನನ್ನ ನಾರಿನ ಉಡುಗೆ, ನನ್ನ ತೈಲ, ನನ್ನ ಪಾಯಸಪಾನಕಗಳನ್ನು ಕೊಡುವಂಥ ನನ್ನ ಪ್ರೇಮಿಗಳ ಹಿಂದೆ ಹೋಗುವೆನು,’ ಎಂದುಕೊಂಡಿದ್ದಾಳೆ. ಅಧ್ಯಾಯವನ್ನು ನೋಡಿ |