ಹೋಶೇಯ 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದಕಾರಣ ನಾನು ನನ್ನ ಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವುದಕ್ಕೆ ನಾನು ಕೊಟ್ಟ ಉಣ್ಣೆ, ನಾರುಗಳನ್ನು ಹಿಂತೆಗೆದುಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದಕಾರಣ ನಾನು ದವಸಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು. ಅವಳ ಮಾನವನ್ನು ಮುಚ್ಚುತ್ತಿದ್ದ ಉಣ್ಣೆಉಡಿಗೆಗಳನ್ನು ಹಿಂತೆಗೆದುಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದಕಾರಣ ನಾನು ನನ್ನ ಧಾನ್ಯದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವದಕ್ಕೆ ನಾನು ಕೊಟ್ಟ ಉಣ್ಣೆನಾರುಗಳನ್ನು ಕಿತ್ತುಬಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದ್ದರಿಂದ ನಾನು ಹಿಂತಿರುಗಿ ಬರುವೆನು. ನಾನು ಕೊಟ್ಟಿರುವ ಧಾನ್ಯವು ಕೊಯ್ಲಿಗೆ ತಯಾರಾದ ಅವಳಿಂದ ಅದನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ದ್ರಾಕ್ಷಿಹಣ್ಣು ಪಕ್ವವಾಗಿದ್ದಾಗ ನಾನು ಬಂದು ನನ್ನ ದ್ರಾಕ್ಷಾರಸವನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ನಾನು ಕೊಟ್ಟಿರುವ ಉಣ್ಣೆ ಮತ್ತು ನಾರಿನ ಬಟ್ಟೆಯನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ನಾನು ಅದನ್ನು ಅವಳಿಗೆ ತನ್ನ ಬೆತ್ತಲೆ ಶರೀರವನ್ನು ಮುಚ್ಚಿಕೊಳ್ಳುವದಕ್ಕೋಸ್ಕರ ಕೊಟ್ಟಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಆದ್ದರಿಂದ ನಾನು ತಿರುಗಿಕೊಂಡು, ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ, ನನ್ನ ದ್ರಾಕ್ಷಾರಸವನ್ನು ಅದರ ಸುಗ್ಗಿಯ ಸಮಯದಲ್ಲಿಯೂ ತೆಗೆದ ಹಾಗೆ, ಅವಳ ಬೆತ್ತಲೆತನವನ್ನು ಮುಚ್ಚವುದಕ್ಕಿದ್ದ ನನ್ನ ಉಣ್ಣೆಯನ್ನೂ, ನನ್ನ ನಾರುಬಟ್ಟೆಯನ್ನೂ ತೆಗೆದುಕೊಳ್ಳುವೆನು. ಅಧ್ಯಾಯವನ್ನು ನೋಡಿ |