Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ, “ನೀನು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ದೀಪದ್ರಾಕ್ಷೆಯ ಅಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವನು ಪ್ರೀತಿಸುವ ಪ್ರಕಾರ, ನೀನು ಜಾರನಿಗೆ ಪ್ರಿಯಳೂ, ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ” ಎಂದು ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ಸರ್ವೇಶ್ವರ ನನಗೆ ಹೇಳಿದ್ದೇನೆಂದರೆ: “ನನ್ನ ಜನರಾದ ಇಸ್ರಯೇಲಿನವರು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ಅವುಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ಬಯಸುತ್ತಾರೆ. ಆದರೂ ಸರ್ವೇಶ್ವರ ಅವರನ್ನು ಪ್ರೀತಿಸುತ್ತಾರೆ. ಇದಕ್ಕೆ ನಿದರ್ಶನವಾಗಿ, ನೀನು ಹೋಗಿ, ಜಾರನಿಗೆ ಪ್ರಿಯಳೂ ಮತ್ತು ವ್ಯಭಿಚಾರಿಣಿಯೂ ಆದ ಸ್ತ್ರೀಯೊರ್ವಳನ್ನು ಪ್ರೀತಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ನನಗೆ - ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು ದೀಪದ್ರಾಕ್ಷೆಯ ಅಡೆಗಳನ್ನು ಪ್ರೀತಿಸುವ ಇಸ್ರಾಯೇಲ್ಯರನ್ನು ಯೆಹೋವನು ಪ್ರೀತಿಸುವ ಪ್ರಕಾರ ನೀನು ವಿುಂಡನಿಗೆ ಪ್ರಿಯಳೂ ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ ಎಂದು ಅಪ್ಪಣೆಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತಿರುಗಿ ಯೆಹೋವನು ನನಗೆ ಮತ್ತೆ ಹೇಳಿದ್ದೇನೆಂದರೆ, “ಗೋಮೆರಳಿಗೆ ಅನೇಕ ಪ್ರಿಯತಮರಿದ್ದಾರೆ, ಆದರೆ ನೀನು ಆಕೆಯನ್ನು ಪ್ರೀತಿ ಮಾಡುತ್ತಲೇ ಇರಬೇಕು. ಯಾಕೆಂದರೆ ಅದು ಯೆಹೋವನ ರೀತಿ. ಯೆಹೋವನು ಇಸ್ರೇಲ್ ಜನರನ್ನು ಪ್ರೀತಿಸುತ್ತಲೇ ಇದ್ದಾನೆ. ಆದರೆ ಅವರು ಅನ್ಯದೇವರುಗಳನ್ನು ಆರಾಧಿಸುತ್ತಲೇ ಇದ್ದಾರೆ. ಅವರು ಒಣದ್ರಾಕ್ಷಿಯ ಉಂಡೆಗಳನ್ನು ತಿನ್ನಲು ಆಶಿಸುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ತರುವಾಯ ಯೆಹೋವ ದೇವರು ನನಗೆ, “ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು, ದ್ರಾಕ್ಷಿ ಉಂಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವ ದೇವರು ಪ್ರೀತಿಸುವ ಪ್ರಕಾರ, ನೀನು ಹೋಗಿ ನಿನ್ನ ಹೆಂಡತಿ ವ್ಯಭಿಚಾರಿಣಿಯಾಗಿದ್ದರೂ ಆಕೆಯನ್ನು ಪುನಃ ಪ್ರೀತಿಸು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 3:1
34 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ನಾನಂತು ಯೆಹೋವನನ್ನು ಎದುರುನೋಡುವೆನು. ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.


ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.


ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ನಾನು ಕನಿಕರವುಳ್ಳವನಾಗಿ ಯೆರೂಸಲೇಮಿಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಪುನಃ ಅಲ್ಲಿ ಕಟ್ಟಲ್ಪಡುವುದು; ಯೆರೂಸಲೇಮಿನಲ್ಲಿ ನೂಲು ಎಳೆಯಲ್ಪಡುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಆದರೆ ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿದ್ದೀರಿ” ಎಂದು ಯೆಹೋವನು ನುಡಿಯುತ್ತಾನೆ.


ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.


ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.


ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.


ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.


ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವುರಿಂದ ನಿನ್ನ ಮಹಾಕೃಪಾನುಸಾರವಾಗಿ ಅವರನ್ನು ನಾಶಮಾಡಲಿಲ್ಲ, ಕೈಬಿಡಲೂ ಇಲ್ಲ.


ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.


ಸಭೆಯಾಗಿ ಸೇರಿ ಬಂದಿರುವ ಇಸ್ರಾಯೇಲರ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನೂ ಮತ್ತು ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಕೊಡಿಸಿದರು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು.


ಆ ಊರಿನವರು ಒಂದಾನೊಂದು ದಿನ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು, ಆಲೆಗಳಲ್ಲಿ ರಸತೆಗೆದು, ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ, ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಆದುದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಆನಂತರ ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಆಮೇಲೆ ಕುಣಿದಾಡಲು ಎದ್ದರು.


ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, “ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ.


ಯೇಸು ಅವನಿಗೆ, “ಗೆಳೆಯನೇ, ನೀನು ಯಾಕೆ ಬಂದಿರುವೇ” ಎಂದು ಹೇಳಿದನು. ಅವರು ಹತ್ತಿರಕ್ಕೆ ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.


ನಮ್ಮ ರಾಜನ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.


ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.


ಹಾಗೂ ಅವರಲ್ಲಿ ಪ್ರತಿಯೊಬ್ಬ ಪುರುಷ ಹಾಗು ಸ್ತ್ರೀಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಬೇಯಿಸಿದ ಮಾಂಸವನ್ನೂ ಮತ್ತು ದ್ರಾಕ್ಷಿಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು.


ಅಸ್ವಸ್ಥಳಾಗಿರುವೆನು ಅನುರಾಗದಿಂದ, ದೀಪದ್ರಾಕ್ಷೆಯಿಂದ ನನ್ನನ್ನು ಉಪಚರಿಸಿರಿ, ಸೇಬು ಹಣ್ಣುಗಳಿಂದ ನನ್ನನ್ನು ಚೈತನ್ಯಗೊಳಿಸಿರಿ.


ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು