Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹ, ಇವುಗಳಿಲ್ಲದೆ ಇಸ್ರಾಯೇಲ್ಯರು ಬಹು ದಿವಸ ತಾಳಿಕೊಂಡಿರುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದೇ ರೀತಿಯಲ್ಲಿ, ಇಸ್ರೇಲಿನ ಜನರು ಬಹಳ ದಿವಸಗಳ ತನಕ ಅರಸನಾಗಲಿ ಅಧಿಪತಿಯಾಗಲಿ ಇಲ್ಲದೆ ಇರುವರು. ಅವರು ಯಜ್ಞವಿಲ್ಲದೆ ಇರುವರು, ಸ್ಮಾರಕಸ್ತಂಭಗಳೂ ಇರುವದಿಲ್ಲ. ಅವರಲ್ಲಿ ಏಫೋದ್ ಇರುವದಿಲ್ಲ; ಅಲ್ಲದೆ ಮನೆದೇವತೆಯೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 3:4
44 ತಿಳಿವುಗಳ ಹೋಲಿಕೆ  

ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ, ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು, ತನ್ನ ಮಕ್ಕಳಲ್ಲಿ ಒಬ್ಬನನ್ನು ಅರ್ಚಕ ಸೇವೆಗಾಗಿ ಪ್ರತಿಷ್ಠಿಸಿದನು.


ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.


ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.


ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.


ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.


ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”


ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆ ಎಂಬುದನ್ನು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದನು.


ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಆದ್ದರಿಂದ ಇಸ್ರಾಯೇಲರೆಲ್ಲರೂ ಅದನ್ನು ಪೂಜಿಸುತ್ತಿದ್ದುದರಿಂದ ದೈವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.


ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ, ಏಫೋದ್, ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.


ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.


ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.


ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; ಕೋಪೋದ್ರೇಕನಾಗಿ ಅವರನ್ನು ತೆಗೆದು ಹಾಕಿದ್ದೇನೆ.


ನಾನು ಅವಳ ಉಲ್ಲಾಸ, ಹಬ್ಬ, ಹುಣ್ಣಿಮೆ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.


ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯಹೋಮವನ್ನು ನೀಗಿಸಿ, ಹಾಳುಮಾಡುವ ಅಸಹ್ಯವಸ್ತುವನ್ನು ಪ್ರತಿಷ್ಠಿಸುವುದು.


“ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.


“ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.”


ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.


ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.


ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದು ಹೇಳಲು ಅವನು ತಂದನು.


ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಫೋದನ್ನು ತಂದಿದ್ದನು,


ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು.


ಅವನು, “ನೀನು ಏಲಾ ತಗ್ಗಿನಲ್ಲಿ ಕೊಂದು ಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು, ಏಫೋದಿನ ಹಿಂದೆ ಇಡಲ್ಪಟ್ಟಿದೆ. ಬೇಕಾದರೆ ಅದನ್ನು ತೆಗೆದುಕೊ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ” ಎಂದು ಉತ್ತರಕೊಟ್ಟನು. ದಾವೀದನು, “ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ. ಅದನ್ನೇ ಕೊಡು” ಎಂದು ಹೇಳಿ ತೆಗೆದುಕೊಂಡನು.


ಏಫೋದನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದರು. ಆ ಅಹೀಯನು ಶೀಲೋವಿನಲ್ಲಿ ಯೆಹೋವನ ಯಾಜಕನಾಗಿದ್ದ ಏಲಿಯ ಮರಿಮಗನೂ, ಫೀನೆಹಾಸನ ಮೊಮ್ಮಗನೂ, ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.


ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.


ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿ, ಮೇಲಂಗಿಯನ್ನು ತೊಡಿಸಿ, ಏಫೋದ್ ಕವಚವನ್ನು ಹಾಕಿಸಿ, ಕವಚದ ಮೇಲೆ ಸೊಗಸಾಗಿ ನೇಯ್ದ ನಡುಕಟ್ಟನ್ನು ಕಟ್ಟಿದನು, ಅದರಿಂದ ಕವಚವನ್ನು ಅವನಿಗೆ ಹೊದಿಸಿದನು.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ.


ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ಏಫೋದೂ, ದೇವತಾಪ್ರತಿಮೆಗಳೂ, ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬುದು ನಿಮಗೆ ಗೊತ್ತುಂಟೋ?


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.


ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.


ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜನನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ; ನಿನ್ನನ್ನು ರಕ್ಷಿಸಬಲ್ಲ ನಗರಪಾಲಕರು ಎಲ್ಲಿ?


ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.


ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಿ ಅದನ್ನು ಚಿನ್ನ, ನೀಲಿ, ನೇರಳೆ ಹಾಗೂ ಕಡುಗೆಂಪು ದಾರಗಳಿಂದಲೂ ಕಸೂತಿ ಹಾಕಿಸಿ ಅಲಂಕರಿಸಬೇಕು.


ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ. ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ.’ ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.”


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಊದಿ, ನಿನ್ನನ್ನು ಮೃಗಪ್ರಾಯರೂ, ಹಾಳುಮಾಡುವುದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು