Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 3:5
36 ತಿಳಿವುಗಳ ಹೋಲಿಕೆ  

ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.”


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.


ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.


“ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.


ಅವು ತಮ್ಮ ದನ ಮತ್ತು ಕುರಿಗಳ ಸಂಗಡ ಯೆಹೋವನಿಗೆ ಶರಣುಹೊಗಲು ಹೊರಡುವವು; ಆತನು ಸಿಕ್ಕುವುದಿಲ್ಲ, ಅವುಗಳಿಂದ ಮರೆಯಾಗಿದ್ದಾನೆ.


ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.


ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.


ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”


ಯೆಹೋವನು ಇಂತೆನ್ನುತ್ತಾನೆ, “ದಾವೀದನ ವಂಶವು ನಿಂತು ಹೋಗದೆ ಆ ಸಂತಾನದವರು ಇಸ್ರಾಯೇಲರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು.


ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.


ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”


ಯೆಹೋವನು ತನ್ನ ಹೃದಯಾಲೋಚನೆಯನ್ನು ಕಾರ್ಯಗತಗೊಳಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು, ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.


ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.


ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.


ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು.


ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.


ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;


ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು; ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು.


ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು