ಹೋಶೇಯ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿಕೇಳುತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನಿರೀಕ್ಷಿಸುತ್ತಾರೆ. ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನನ್ನ ಜನರು ಮರದ ತುಂಡನ್ನು ಹಿಡಿದು ಕಣಿ ಕೇಳುತ್ತಾರೆ; ಕೈಯಲ್ಲಿ ಹಿಡಿದ ದೊಣ್ಣೆಯಿಂದ ವಿವೇಕವಾಣಿಯನ್ನು ಪಡೆಯಲೆತ್ನಿಸುತ್ತಾರೆ. ವ್ಯಭಿಚಾರಗುಣ ಅವರನ್ನು ತಪ್ಪುದಾರಿಗೆ ಎಳೆದಿದೆ. ದೇವರ ಸದ್ಭಕ್ತಿಯನ್ನು ತೊರೆದು ಅವರು ಧರ್ಮಭ್ರಷ್ಠರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನನ್ನ ಜನರು ತಮ್ಮ ಮರದ ತುಂಡನ್ನು ಪ್ರಶ್ನೆ ಕೇಳುತ್ತಾರೆ, ಅವರ ಕೋಲು ಅವರಿಗೆ ಅರುಹನ್ನು ಉಂಟುಮಾಡುತ್ತದೆ; ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನನ್ನ ಜನರು ಮರದ ತುಂಡುಗಳಿಂದ ಸಲಹೆಗಳನ್ನು ಕೇಳುವರು. ಆ ಮರದ ತುಂಡುಗಳು ಅವರಿಗೆ ಉತ್ತರಿಸುವವು ಎಂದು ಅವರು ನೆನಸುತ್ತಾರೆ. ಯಾಕೆಂದರೆ, ವೇಶ್ಯೆಯರಂತೆ ಅವರು ಆ ಸುಳ್ಳು ದೇವರುಗಳನ್ನು ಹಿಂದಟ್ಟಿಕೊಂಡು ಹೋಗುವರು. ಅವರು ತಮ್ಮ ದೇವರುಗಳನ್ನು ಬಿಟ್ಟು ವೇಶ್ಯೆಯರಂತೆ ವರ್ತಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |