ಹೋಶೇಯ 5:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.” ಅಧ್ಯಾಯವನ್ನು ನೋಡಿ |
ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.