Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇಸ್ರಾಯೇಲೂ ಮತ್ತು ಎಫ್ರಾಯೀಮೂ ತಮ್ಮ ದುರ್ಮಾರ್ಗದಲ್ಲಿ ಎಡವಿ ಬೀಳುವವು; ಯೆಹೂದವೂ ಅವುಗಳೊಂದಿಗೆ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇಸ್ರಯೇಲಿನ ಅಹಂಕಾರವೇ ಅದಕ್ಕೆ ವಿರುದ್ಧ ಸಾಕ್ಷಿ ನುಡಿಯುತ್ತದೆ. ಇಸ್ರಯೇಲ್ ಮತ್ತು ಎಫ್ರಯಿಮ್ ತಮ್ಮ ದುರ್ಮಾರ್ಗದಲ್ಲಿ ಮುಗ್ಗರಿಸಿ ಬೀಳುತ್ತವೆ. ಜುದೇಯವೂ ಅದರಂತೆಯೇ ಬೀಳಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧಸಾಕ್ಷಿಯಾಗಿದೆ; ಇಸ್ರಾಯೇಲೂ ಎಫ್ರಾಯೀಮೂ ತಮ್ಮ ದುರ್ಮಾರ್ಗದಲ್ಲಿ ಎಡವಿ ಬೀಳುವವು; ಯೆಹೂದವೂ ಅವುಗಳೊಂದಿಗೆ ಬೀಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇಸ್ರೇಲಿನ ಹೆಮ್ಮೆಯು ಅವರಿಗೆ ವಿರುದ್ಧವಾಗಿ ಸಾಕ್ಷಿನೀಡುತ್ತದೆ. ಇಸ್ರೇಲ್ ಮತ್ತು ಎಫ್ರಾಯೀಮ್ ತಮ್ಮ ಪಾಪಗಳಿಂದಲೇ ಮುಗ್ಗರಿಸುವರು. ಯೆಹೂದವೂ ಅವರೊಂದಿಗೆಯೇ ಮುಗ್ಗರಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಸ್ರಾಯೇಲಿನ ಗರ್ವವು ಅವರ ಮುಖದ ಮುಂದೆ ಸಾಕ್ಷಿಕೊಡುತ್ತದೆ. ಇಸ್ರಾಯೇಲು ಮತ್ತು ಎಫ್ರಾಯೀಮು ತಮ್ಮ ಪಾಪದಲ್ಲಿ ಎಡವಿ ಬೀಳುವವು. ಯೆಹೂದವು ಸಹ ಅವರೊಂದಿಗೆ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 5:5
25 ತಿಳಿವುಗಳ ಹೋಲಿಕೆ  

ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ; ಆತನನ್ನು ಆಶ್ರಯಿಸಲಿಲ್ಲ.


ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ; ಮತ್ತೆ ಏಳುವುದೇ ಇಲ್ಲ; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನು ಎತ್ತಲು ಯಾರೂ ಇಲ್ಲ.


ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?


ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.


ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.


ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”


ನಾನು ಎಫ್ರಾಯೀಮಿಗೆ ಸಿಂಹವೂ, ಯೆಹೂದ ಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಯಾರೂ ಬಿಡಿಸರು.


ಆಹಾ, ಯಾಜಕರೇ, ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು.


ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.


ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮ್ಮ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು.


ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.


ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ಕಣ್ಣುರೆಪ್ಪೆಗಳನ್ನೆತ್ತಿಕೊಂಡು, ಎಷ್ಟೋ ಮೇಲೆ ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರು ಉಂಟು.


ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.


ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು. ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ?


ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು