ಹೋಶೇಯ 5:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದ್ರೋಹಮಾಡಿವೆ; ಅವುಗಳನ್ನೂ, ಅವುಗಳ ಭೂಸ್ವಾಸ್ತ್ಯಗಳನ್ನೂ ಈ ಅಮಾವಾಸ್ಯೆಯು ನುಂಗಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರು ವ್ಯಭಿಚಾರದಿಂದ ಸರ್ವೇಶ್ವರಸ್ವಾಮಿಗೆ ದ್ರೋಹವೆಸಗಿದ್ದಾರೆ. ಅವರ ಮಕ್ಕಳು ಆ ಸ್ವಾಮಿಯ ಮಕ್ಕಳಲ್ಲ; ಮುಂದಿನ ಅಮಾವಾಸ್ಯೆಯೊಳಗಾಗಿ ಅವರು ನಾಶವಾಗುವರು. ಅವರ ಸ್ವತ್ತೆಲ್ಲಾ ಅಳಿದುಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದ್ರೋಹಮಾಡಿವೆ; ಅವುಗಳನ್ನೂ ಅವುಗಳ ಭೂಸ್ವಾಸ್ತ್ಯಗಳನ್ನೂ ಈಗ ಈ ಮುಂದಿನ ತಿಂಗಳು ನುಂಗಿಬಿಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರ ಮಕ್ಕಳು ಅನ್ಯರಿಗೆ ಹುಟ್ಟಿದ್ದಾರೆ. ಆದ್ದರಿಂದ ಈಗ ಆತನು ಅವರನ್ನೂ ಅವರ ದೇಶವನ್ನೂ ತಿರುಗಿ ನಾಶಮಾಡುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ಯೆಹೋವ ದೇವರಿಗೆ ಅಪನಂಬಿಗಸ್ತರಾಗಿದ್ದಾರೆ. ಅವರು ವ್ಯಭಿಚಾರದ ಮಕ್ಕಳನ್ನು ಪಡೆದಿದ್ದಾರೆ. ಅವರು ತಮ್ಮ ಅಮಾವಾಸ್ಯೆ ಹಬ್ಬಗಳನ್ನು ಆಚರಿಸಿದಾಗ, ಅವರ ಹೊಲಗಳು ನುಂಗಿಬಿಡಲಾಗುವವು. ಅಧ್ಯಾಯವನ್ನು ನೋಡಿ |