Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 6:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಇಸ್ರಾಯೇಲ್ ಮನೆತನದಲ್ಲಿ ಅಸಹ್ಯವನ್ನು ನೋಡಿದ್ದೇನೆ; ಎಫ್ರಾಯೀಮಿನೊಳಗೆ ವ್ಯಭಿಚಾರವು ನಡೆಯುತ್ತದೆ, ಇಸ್ರಾಯೇಲು ಹೊಲೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಸ್ರಯೇಲ್ ಮನೆತನದಲ್ಲಿ ಘೋರಕೃತ್ಯಗಳು ಕಾಣಿಸಿಕೊಂಡಿವೆ. ಅಲ್ಲಿ ಎಫ್ರಯಿಮಿನೊಳಗೆ ವೇಶ್ಯಾಚಾರ ನಡೆಯುತ್ತಿದೆ. ಇಸ್ರಯೇಲ್ ಕಲುಷಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಇಸ್ರಾಯೇಲ್ ಮನೆತನದಲ್ಲಿ ಅಸಹ್ಯವನ್ನು ನೋಡಿದ್ದೇನೆ; ಎಫ್ರಾಯೀವಿುನೊಳಗೆ ಸೂಳೆತನವು ನಡೆಯುತ್ತದೆ, ಇಸ್ರಾಯೇಲು ಹೊಲೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇಸ್ರೇಲ್ ಜನಾಂಗದಲ್ಲಿ ಅತೀ ಭಯಂಕರ ಸಂಗತಿಗಳನ್ನು ನಾನು ನೋಡಿರುತ್ತೇನೆ. ಎಫ್ರಾಯೀಮು ದೇವರಿಗೆ ದ್ರೋಹಿಯಾದನು. ಇಸ್ರೇಲು ಪಾಪದಿಂದ ಹೊಲಸಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರವಾದ ಸಂಗತಿಯನ್ನು ನೋಡಿದೆನು. ಅಲ್ಲಿ ಎಫ್ರಾಯೀಮಿನ ವ್ಯಭಿಚಾರವು ನಡೆಯುತ್ತದೆ, ಇಸ್ರಾಯೇಲು ಅಪವಿತ್ರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 6:10
14 ತಿಳಿವುಗಳ ಹೋಲಿಕೆ  

ಎಫ್ರಾಯೀಮನ್ನು ಬಲ್ಲೆ, ಇಸ್ರಾಯೇಲ್ ನನಗೆ ಮರೆಯಾಗಿಲ್ಲ; ಎಫ್ರಾಯೀಮೇ, ನೀನೀಗ ವ್ಯಭಿಚಾರ ಮಾಡಿದ್ದಿ, ಇಸ್ರಾಯೇಲ್ ಹೊಲೆಯಾಗಿದೆ.


ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.


ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ.


ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.


“ಒಹೊಲಳು ನನ್ನ ವಶವಾಗಿರುವಾಗಲೇ, ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯರನ್ನು,


ಹೀಗಿರಲು ಯೆಹೋವನು ಹೀಗೆನ್ನುತ್ತಾನೆ, “ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯಕಾರ್ಯವನ್ನು ಮಾಡಿದ್ದಾಳೆ.


ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.


ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.


ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದ್ದರಿಂದ ಹೀಗಾಯಿತು.


ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿ,


ಅವರಿಗೆ ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.


ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿಕೇಳುತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನಿರೀಕ್ಷಿಸುತ್ತಾರೆ. ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು