Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 6:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮೂರನೆಯ ದಿನದಲ್ಲಿ ಅವರು ನಮ್ಮನ್ನು ಎಬ್ಬಿಸುವರು. ಆಗ ನಾವು ಅವರ ಸನ್ನಿಧಿಯಲ್ಲಿ ಬಾಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಎರಡು ದಿವಸಗಳ ತರುವಾಯ ನಮ್ಮನ್ನು ತಿರುಗಿ ಜೀವಂತ ಮಾಡುವನು. ಮೂರನೇ ದಿವಸದಲ್ಲಿ ನಮ್ಮನ್ನು ಎಬ್ಬಿಸುವನು. ಆಗ ನಾವು ಆತನ ಸಮೀಪದಲ್ಲಿ ವಾಸಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಎರಡು ದಿವಸಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು. ಮೂರನೆಯ ದಿವಸದಲ್ಲಿ ಆತನೇ ನಮ್ಮನ್ನು ಪುನಃಸ್ಥಾಪಿಸುವರು. ನಾವು ಅವರ ದೃಷ್ಟಿಯಲ್ಲಿ ಜೀವಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 6:2
14 ತಿಳಿವುಗಳ ಹೋಲಿಕೆ  

“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.


ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.


ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಅಬ್ರಹಾಮನು ದೇವರಿಗೆ, “ಇಷ್ಮಾಯೇಲ್ ಇದ್ದಾನಲ್ಲಾ, ಅವನೇ ನಿನ್ನ ದಯೆ ಹೊಂದಿ ಬಾಳಲಿ” ಎನ್ನಲು.


ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತನವರೇ.


ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.


ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.


ಕೊಲ್ಲುವ ಸಮಯ, ಸ್ವಸ್ಥಮಾಡುವ ಸಮಯ ಕೆಡುವಿಬಿಡುವ ಸಮಯ, ಕಟ್ಟುವ ಸಮಯ,


ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.


ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು