Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 6:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ಸರ್ವೇಶ್ವರ ಹೇಳುವುದೇನೆಂದರೆ: “ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗುವ ಇಬ್ಬನಿಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಬೇಕು? ನಿನ್ನ ನಂಬಿಗಸ್ತಿಕೆಯು ಮುಂಜಾನೆಯ ಮಂಜಿನಂತಿದೆ. ನಿನ್ನ ನಂಬಿಗಸ್ತಿಕೆಯು ಇಬ್ಬನಿಯಂತಿದೆ. ಅದು ಬೇಗನೆ ಇಲ್ಲದೆಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಪ್ರೀತಿಯು ಹೊತ್ತಾರೆಯ ಮೇಘದ ಹಾಗೆಯೂ, ಮುಂಜಾನೆಯ ಮಂಜಿನ ಹಾಗೆಯೂ ಹೋಗಿಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 6:4
19 ತಿಳಿವುಗಳ ಹೋಲಿಕೆ  

ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.


ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.


ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ.


ಹೀಗಿರಲು ಸೇನಾಧೀಶ್ವರನಾದ ಯೆಹೋವನು, “ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.


ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.


ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.


“ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.


ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.


ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲನ್ನು ಸ್ವಸ್ಥ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಅಧರ್ಮವೂ, ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ. ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.


ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು