Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ; ಆತನನ್ನು ಆಶ್ರಯಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಸ್ರಯೇಲಿನ ಅಹಂಕಾರವೇ ಅದರ ವಿರುದ್ಧ ಸಾಕ್ಷಿ ನುಡಿಯುತ್ತದೆ. ಇಷ್ಟೆಲ್ಲ ಸಂಭವಿಸಿದರೂ ಅದು ತನ್ನ ದೇವರಾದ ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗುವುದಿಲ್ಲ; ಅವರನ್ನು ಆಶ್ರಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ, ಆತನನ್ನು ಆಶ್ರಯಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಎಫ್ರಾಯೀಮನ ಹೆಮ್ಮೆಯು ಅವನಿಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತದೆ. ಜನರಿಗೆ ನಾನಾ ತರದ ಸಂಕಟಗಳು ಬಂದಾಗ್ಯೂ ಅವರು ತಮ್ಮ ದೇವರಾದ ಯೆಹೋವನ ಬಳಿಗೆ ಹೋಗಲಿಲ್ಲ. ಜನರು ತಮ್ಮ ಸಹಾಯಕ್ಕಾಗಿ ಆತನಿಗೆ ಮೊರೆಯಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇಸ್ರಾಯೇಲಿನ ಗರ್ವವು ಅವನಿಗೆ ವಿರುದ್ಧವಾಗಿ ಸಾಕ್ಷಿಕೊಡುತ್ತದೆ. ಆದರೂ ಅವರು ತಮ್ಮ ಯೆಹೋವ ದೇವರ ಕಡೆಗೆ ತಿರುಗದೆ ಇದ್ದಾರೆ. ಆತನನ್ನು ಹುಡುಕದೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:10
18 ತಿಳಿವುಗಳ ಹೋಲಿಕೆ  

ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇಸ್ರಾಯೇಲೂ ಮತ್ತು ಎಫ್ರಾಯೀಮೂ ತಮ್ಮ ದುರ್ಮಾರ್ಗದಲ್ಲಿ ಎಡವಿ ಬೀಳುವವು; ಯೆಹೂದವೂ ಅವುಗಳೊಂದಿಗೆ ಬೀಳುವುದು.


ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.


ತಿಳಿವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ.


ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.


ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲ ರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ.


ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.


ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ, ಮೂರ್ಖತನವು ಅವನಿಂದ ತೊಲಗದು.


ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,


ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,


ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.


ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.”


ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು