Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎಫ್ರಾಯೀಮು ಬುದ್ಧಿ ವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಎಫ್ರಯಿಮ್ ಬುದ್ಧಿವಿವೇಕವಿಲ್ಲದ ಪಾರಿವಾಳದಂತೆ; ಅದರ ಜನರು ಈಜಿಪ್ಟನ್ನು ಸಹಾಯಕ್ಕೆ ಕರೆಯುತ್ತಾರೆ. ಅಸ್ಸೀರಿಯದ ಆಶ್ರಯಕ್ಕೆ ಓಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎಫ್ರಾಯೀಮು ಬುದ್ಧಿವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹೀಗೆ ಎಫ್ರಾಯೀಮ್ ತಿಳಿವಳಿಕೆ ಇಲ್ಲದ ಮೂರ್ಖ ಪಾರಿವಾಳದಂತಾಗಿದೆ. ಜನರು ಸಹಾಯಕ್ಕಾಗಿ ಈಜಿಪ್ಟನ್ನು ಕರೆದರು, ಅಶ್ಶೂರ್ಯದ ಕಡೆಗೆ ಓಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಎಫ್ರಾಯೀಮು ಸಹ ಸುಲಭವಾಗಿ ಮೋಸಕ್ಕೆ ಒಳಗಾಗುವ ಪಾರಿವಾಳದ ಹಾಗಿದ್ದಾನೆ. ಈಗ ಅವರು ಈಜಿಪ್ಟನ್ನು ಕರೆಯುತ್ತಾರೆ. ಈಗ ಅವರು ಅಸ್ಸೀರಿಯದ ಆಶ್ರಯಕ್ಕೆ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:11
25 ತಿಳಿವುಗಳ ಹೋಲಿಕೆ  

ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.


ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು.


ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.


ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.


ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು.


ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.


ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.


ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು, ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.


ವ್ಯಭಿಚಾರಿಯೋ ಕೇವಲ ಬುದ್ಧಿಹೀನನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.


ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.


“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.


ಅವರು ತಮ್ಮ ದೇವರ ಕಡೆಗೆ ತಿರುಗಿಕೊಳ್ಳಲು ಅವುಗಳ ದುಷ್ಕೃತ್ಯಗಳು ಅವರನ್ನು ಬಿಡುವುದಿಲ್ಲ; ವ್ಯಭಿಚಾರದ ಸ್ವಭಾವವು ಅವುಗಳಲ್ಲಿ ನೆಲೆಗೊಂಡಿದೆ, ಯೆಹೋವನನ್ನು ತಿಳಿದುಕೊಂಡಿಲ್ಲ.


ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.


ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಸ್ಮಶಾನವಾಗುವುದು, ಮೋಫ್ ಪಟ್ಟಣವು ಅವರನ್ನು ಹೂಣಿಡುವುದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ಮುಳ್ಳು ಪೊದೆಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.


ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು” ಎಂದು ಕೇಳಿಕೊಂಡನು.


ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು.


ನಿನ್ನ ಮಿತ್ರ ಮಂಡಲಿಯವರೆಲ್ಲರೂ ನಿನ್ನನ್ನು ನಿನ್ನ ಮೇರೆಯ ಆಚೆಗೆ ತಳ್ಳಿಬಿಟ್ಟಿದ್ದಾರೆ, ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ವಿವೇಕವಿಲ್ಲದೆ ನಿನಗೆ ಉರುಲೊಡ್ಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು