Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನೆರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನ್ಯಜನರು ಅದರ ಶಕ್ತಿಯನ್ನು ಹೀರಿಕೊಂಡರೂ ಅದಕ್ಕೆ ಅರಿವಿಲ್ಲ. ಅದರ ತಲೆಗೂದಲು ನೆರೆತುಹೋದರೂ ಅದಕ್ಕೆ ಪ್ರಜ್ಞೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅನ್ಯರು ಎಫ್ರಾಯೀಮನ ಶಕ್ತಿಯನ್ನು ಮುರಿಯುವರು. ಆದರೆ ಅವನಿಗೆ ಅದು ತಿಳಿದಿರುವದಿಲ್ಲ. ಎಫ್ರಾಯೀಮನ ತಲೆಯಲ್ಲಿ ನರೆಕೂದಲು ಬಂದಾಗ್ಯೂ ಅದಕ್ಕೆ ತಿಳಿವಳಿಕೆ ಬಂದಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ವಿದೇಶಿಯರು ಅವನ ಶಕ್ತಿಯನ್ನು ಹೀರಿಬಿಟ್ಟಿದ್ದಾರೆ. ಅದು ಅವನಿಗೆ ಗೊತ್ತಿಲ್ಲ. ನರೆಕೂದಲು ಸಹ ಅವನ ಮೇಲೆ ಇದೆ. ಆದರೂ ಅವನು ತಿಳಿಯದೇ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:9
10 ತಿಳಿವುಗಳ ಹೋಲಿಕೆ  

ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.


ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.


ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.


ಆದರೆ ಅರಾಮ್ಯರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಾಯೇಲರನ್ನು ಪೀಡಿಸುತ್ತಿದ್ದನು.


ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.


ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.


ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು