Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬಾಯಿಗೆ ತುತೂರಿಯನ್ನು ಹಿಡಿ. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಯೆಹೋವನಾಲಯದ ಕಾವಲುಗಾರನಂತೆ ತುತ್ತೂರಿಯನ್ನು ನಿನ್ನ ತುಟಿಗಳಲ್ಲಿಟ್ಟು ಊದು. ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ ಒಡಂಬಡಿಕೆಯನ್ನು ಮುರಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ. ಅವರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ನ್ಯಾಯ ಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಶತ್ರುಗಳು ಹದ್ದಿನ ಹಾಗೆ ಯೆಹೋವ ದೇವರ ಆಲಯದ ಮೇಲೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:1
34 ತಿಳಿವುಗಳ ಹೋಲಿಕೆ  

ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.


ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.


ಗಿಬ್ಯದಲ್ಲಿ ತುತ್ತೂರಿಯನ್ನು ಊದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತ್ ಅವೆನಿನಲ್ಲಿ ಆರ್ಭಟಿಸಿರಿ, ಬೆನ್ಯಾಮೀನೇ, ಹಿಂದೆ ನೋಡು!


ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.


ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು.


ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.


ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು.


ಲೆಬನೋನೇ, ನಿನ್ನ ಬಾಗಿಲುಗಳನ್ನು ತೆರೆ, ಬೆಂಕಿಯು ನಿನ್ನ ದೇವದಾರುಗಳನ್ನು ನುಂಗಲಿ!


ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು.


ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು, ಆರ್ಭಟಿಸಿ ಕೊಂಬೂದುವ ದಿನ.


ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.


ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!”


ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?


ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ.


ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿರುವೆ ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.


ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


“ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ.


ಯೆಹೋವನು ಇಂತೆನ್ನುತ್ತಾನೆ, “ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.


ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


“ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.


ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.


ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.


ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!


ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಪೌಳಿಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.


ಚೀಯೋನ್ ಪರ್ವತದ ಮೇಲೆ ನಿಂತು ಕೊಂಬೂದಿರಿ, ಉಪವಾಸ ದಿನವನ್ನು ಗೊತ್ತುಮಾಡಿರಿ, ಪವಿತ್ರ ಸಭೆಯನ್ನು ಕರೆಯಿರಿ.


ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಮುಂದೆ ಮಾಡಿದ ಒಡಂಬಡಿಕೆಯನ್ನು ಮೀರಿದವರಿಗೆ ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗುವ ಗತಿ ಬರುವಂತೆ ಮಾಡುವೆನು.


ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಗಲವಾದ ಮತ್ತು ಉದ್ದವಾದ ರೆಕ್ಕೆಗಳಿಂದ ತುಂಬಿದ, ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತು ಹಾಕಿತು.


ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಅಹಿತವನ್ನು ನುಡಿ, ತಪ್ಪದೆ ನುಡಿ” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು