Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎಫ್ರಾಯೀಮು ಯಜ್ಞವೇದಿಗಳನ್ನು ಹೆಚ್ಚೆಚ್ಚಾಗಿ ಕಟ್ಟಿ ಪಾಪಮಾಡಿದೆ; ಕಟ್ಟಿದ ಯಜ್ಞವೇದಿಗಳೇ ಅದಕ್ಕೆ ಪಾಪವಾಗಿ ಪರಿಣಮಿಸಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಎಫ್ರಯಿಮ್ ಪಾಪಪರಿಹಾರಕ್ಕಾಗಿ ಬಲಿಪೀಠಗಳನ್ನು ಕಟ್ಟಿದೆ. ಆ ಬಲಿಪೀಠಗಳೇ ಅದರ ಪಾಪಕ್ಕೆ ಕಾರಣವಾಗಿ ಪರಿಣಮಿಸಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎಫ್ರಾಯೀಮು ಯಜ್ಞವೇದಿಗಳನ್ನು ಹೆಚ್ಚೆಚ್ಚಾಗಿ ಕಟ್ಟಿ ಪಾಪಮಾಡಿದೆ; ಕಟ್ಟಿದ ಯಜ್ಞವೇದಿಗಳೇ ಅದಕ್ಕೆ ಪಾಪವಾಗಿ ಪರಿಣವಿುಸಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಎಫ್ರಾಯೀಮ್ ಹೆಚ್ಚೆಚ್ಚಾಗಿ ಯಜ್ಞವೇದಿಕೆಗಳನ್ನು ಕಟ್ಟಿಸಿದನು. ಅದು ಪಾಪವಾಗಿತ್ತು. ಆ ವೇದಿಕೆಗಳ ಮೇಲೆಯೇ ಅವರು ಪಾಪಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಎಫ್ರಾಯೀಮು ಪಾಪ ಪರಿಹಾರಕ್ಕಾಗಿ ಅನೇಕ ಬಲಿಪೀಠಗಳನ್ನು ಕಟ್ಟಿದ್ದರೂ, ಈ ಬಲಿಪೀಠಗಳೇ ಅವರ ಪಾಪಕ್ಕೆ ಕಾರಣವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:11
8 ತಿಳಿವುಗಳ ಹೋಲಿಕೆ  

ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವುದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.


ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.


ನೀವಾಗಲಿ ಅಥವಾ ನಿಮ್ಮ ಪೂರ್ವಿಕರಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸುವುದಿಲ್ಲ’” ಎಂದು ಹೇಳಿದನು.


ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.


ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.


ಅವರು ತಮ್ಮ ದೇವರ ಕಡೆಗೆ ತಿರುಗಿಕೊಳ್ಳಲು ಅವುಗಳ ದುಷ್ಕೃತ್ಯಗಳು ಅವರನ್ನು ಬಿಡುವುದಿಲ್ಲ; ವ್ಯಭಿಚಾರದ ಸ್ವಭಾವವು ಅವುಗಳಲ್ಲಿ ನೆಲೆಗೊಂಡಿದೆ, ಯೆಹೋವನನ್ನು ತಿಳಿದುಕೊಂಡಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು