ಹೋಶೇಯ 8:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳಿಗೆ ಮೆಚ್ಚನು; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು. ಅಧ್ಯಾಯವನ್ನು ನೋಡಿ |