ಹೋಶೇಯ 9:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ. ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ನಡೆಸಿದ್ದಿ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲ್, ಹರ್ಷಿಸದಿರು; ಇತರ ರಾಷ್ಟ್ರಗಳೊಡನೆ ಆನಂದಿಸದಿರು. ನಿನ್ನ ದೇವರನ್ನು ತೊರೆದು ವ್ಯಭಿಚಾರ ಮಾಡಿರುವೆ. ಇತರರ ಕಣಗಳಿಂದ ದೊರಕುವ ಕಾಳು ನಿನ್ನ ವ್ಯಭಿಚಾರದ ಸಂಭಾವನೆಯೆಂದು ಹಂಬಲಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲೇ, ಜನಾಂಗಗಳಂತೆ ವಿುತಿಮೀರಿ ಉಲ್ಲಾಸಿಸಬೇಡ; ನೀನು ನಿನ್ನ ದೇವರನ್ನು ಬಿಟ್ಟು ಸೂಳೆತನ ನಡಿಸಿದ್ದೀ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಸ್ರೇಲೇ, ಇತರ ಜನಾಂಗಗಳವರಂತೆ ಹಬ್ಬವನ್ನು ಆಚರಿಸಬೇಡ, ಉಲ್ಲಾಸಗೊಳ್ಳಬೇಡ. ನೀನು ವೇಶ್ಯೆಯಂತೆ ವರ್ತಿಸಿ ನಿನ್ನ ದೇವರನ್ನು ತೊರೆದುಬಿಟ್ಟೆ. ಪ್ರತಿಯೊಂದು ಕಣದ ಮೇಲೆ ಲೈಂಗಿಕ ಪಾಪವನ್ನು ನಡೆಸಿದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲೇ, ಬೇರೆ ಜನಾಂಗಗಳು ಉಲ್ಲಾಸಿಸುವ ಪ್ರಕಾರ ಸಂತೋಷ ಪಡಬೇಡ. ಏಕೆಂದರೆ ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ಮಾಡಿದ್ದೀಯೆ. ಎಲ್ಲಾ ಧಾನ್ಯದ ಕಣಗಳಲ್ಲಿ ವ್ಯಭಿಚಾರದ ಕೂಲಿಯನ್ನು ಪ್ರೀತಿ ಮಾಡಿದ್ದೀಯೆ. ಅಧ್ಯಾಯವನ್ನು ನೋಡಿ |